ಹಬ್ಬಕ್ಕೆ ಸಾಲು-ಸಾಲು ರಜೆ: ಬೆಂಗಳೂರು-ಬೆಳಗಾವಿ, ವಿಜಯಪುರಕ್ಕೆ ವಿಶೇಷ ರೈಲು ವ್ಯವಸ್ಥೆ!
ಬುಕಿಂಗ್ ಮತ್ತು ವೇಳಾಪಟ್ಟಿ ಮಾಹಿತಿಗಾಗಿ, ಪ್ರಯಾಣಿಕರು 139 ಗೆ ಕರೆ ಮಾಡಬಹುದು ಅಥವಾ ಐಆರ್ಸಿಟಿಸಿ ವೆಬ್ಸೈಟ್ ಮೂಲಕವೂ ಪರಿಶೀಲಿಸಿ ಬುಕಿಂಗ್ ಮಾಡಬಹದು ಎಂದು ರೈಲ್ವೆ ತಿಳಿಸಿದೆ.

ಬೆಂಗಳೂರು: ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ಬೆಳಗಾವಿ ಮತ್ತು ವಿಜಯಪುರ ಮಾರ್ಗಗಳಲ್ಲಿ ವಿಶೇಷ ರೈಲು ಕಾರ್ಯಾಚರಣೆ ನಡೆಸಲು ನಿರ್ಧರಿಸಿದೆ.
ರೈಲು ಸಂಖ್ಯೆ 06555 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್, ಸೆಪ್ಟೆಂಬರ್ 5 ರಂದು ಸಂಜೆ 7.30 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 7.15 ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 06556 ಸೆಪ್ಟೆಂಬರ್ 6 ರಂದು ಬೆಳಿಗ್ಗೆ 8.45 ಕ್ಕೆ ಬೆಳಗಾವಿಯಿಂದ ಹೊರಟು ಅದೇ ದಿನ ರಾತ್ರಿ 8 ಗಂಟೆಗೆ ಯಶವಂತಪುರವನ್ನು ತಲುಪಲಿದೆ. ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ಎರಡೂ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ಹೊಂದಿದೆ.
ರೈಲು ಸಂಖ್ಯೆ 06557 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ಸೆಪ್ಟೆಂಬರ್ 6 ರಂದು ರಾತ್ರಿ 10.15 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 10.15 ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 06558 ಸೆಪ್ಟೆಂಬರ್ 8 ರಂದು ಸಂಜೆ 5.30 ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 4.30 ಕ್ಕೆ ಯಶವಂತಪುರವನ್ನು ತಲುಪಲಿದೆ.
ರೈಲು ಸಂಖ್ಯೆ 06577 ಎಸ್ಎಂವಿಟಿ ಬೆಂಗಳೂರು-ವಿಜಯಪುರ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಸೆಪ್ಟೆಂಬರ್ 5 ಮತ್ತು 7 ರಂದು ರಾತ್ರಿ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮರುದಿನ ಮಧ್ಯಾಹ್ನ 2.05 ಕ್ಕೆ ವಿಜಯಪುರ ತಲುಪಲಿದೆ. ರೈಲು ಸಂಖ್ಯೆ 06578 ವಿಜಯಪುರದಿಂದ ಸೆಪ್ಟೆಂಬರ್ 6 ಮತ್ತು 8ರಂದು ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 11.15ಕ್ಕೆ ಬೆಂಗಳೂರು ತಲುಪಲಿದೆ.
ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕ್ಯಾಂಟ್, ತೊರ್ನಗಲ್ಲು, ಹೊಸಪೇಟೆ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿಯಲ್ಲಿ ನಿಲುಗಡೆ ಹೊಂದಿದೆ.
ಬುಕಿಂಗ್ ಮತ್ತು ವೇಳಾಪಟ್ಟಿ ಮಾಹಿತಿಗಾಗಿ, ಪ್ರಯಾಣಿಕರು 139 ಗೆ ಕರೆ ಮಾಡಬಹುದು ಅಥವಾ ಐಆರ್ಸಿಟಿಸಿ ವೆಬ್ಸೈಟ್ ಮೂಲಕವೂ ಪರಿಶೀಲಿಸಿ ಬುಕಿಂಗ್ ಮಾಡಬಹದು ಎಂದು ರೈಲ್ವೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



