ವಿಜಯಪುರ: ಮರಿಯೊಂದಿಗೆ ಚಿರತೆ ಪ್ರತ್ಯಕ್ಷ; ನಾಗರದಿನ್ನಿ ಗ್ರಾಮಸ್ಥರಲ್ಲಿ ಆತಂಕ
ಮಹಾದೇವ ಕೋಲ್ಕಾರ್ ಎಂಬುವವರ ಜಮೀನಿನ ಬಳಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ವಿಜಯಪುರ: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ ಬಳಿ ಸೋಮವಾರ ರಾತ್ರಿ ಚಿರತೆ ಹಾಗೂ ಮರಿಗಳು ಕಾಣಿಸಿಕೊಂಡಿವೆ. ತಮ್ಮ ಜಮೀನಿನ ಬಳಿ ಕಾಡು ಪ್ರಾಣಿಗಳನ್ನು ಗಮನಿಸಿದ ಸ್ಥಳೀಯ ರೈತ ಸುರೇಶ ಕುಬಕಡ್ಡಿ ಅವರು ಈ ದೃಶ್ಯಗಳನ್ನು ಮೊದಲು ವರದಿ ಮಾಡಿದ್ದಾರೆ.
ಮಹಾದೇವ ಕೋಲ್ಕಾರ್ ಎಂಬುವವರ ಜಮೀನಿನ ಬಳಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ತಾಯಿ ಚಿರತೆ ಮತ್ತು ಅದರ ಮರಿಗಳ ಚಲನವಲನ ಜಮೀನಿನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ಪ್ರದೇಶದಲ್ಲಿ ಅವುಗಳ ಇರುವಿಕೆಯನ್ನು ದೃಢಪಡಿಸಿದೆ. ಇದೀಗ ಕಾಡು ಪ್ರಾಣಿಗಳ ಹಾವಳಿ ಇಲ್ಲಿನ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿ ಬಸವರಾಜ ಕೊಣ್ಣೂರ, ಕೊಲ್ಹಾರ ತಹಸೀಲ್ದಾರ್, ಎಸ್.ಎಸ್.ನಾಯಕಲಮಠ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಒಂದು ವೇಳೆ ಕಾಡು ಪ್ರಾಣಿಗಳ ಚಲನವಲನ ಕಂಡು ಬಂದಲ್ಲಿ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜನರ ಬಳಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಆದಷ್ಟು ಬೇಗ ಪ್ರಾಣಿಗಳನ್ನು ಹಿಡಿಯಲು ಅಗತ್ಯ ಕ್ರಮಗಳನ್ನು ದಕೈಗೊಳ್ಳುವುದಾಗಿಯೂ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


