ರಾಜ್ಯ

ಝೀಕಾ ಬೆನ್ನಲ್ಲೇ ಈಗ Mpox ಭೀತಿ: ಆತಂಕ ಪಡುವ ಅಗತ್ಯವಿಲ್ಲ, ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸನ್ನದ್ಧ ಎಂದ ಸಚಿವ

ದೇಶದಲ್ಲಿ ಆರೋಗ್ಯ ತುರ್ತುಸ್ಥಿತಿ ಘೋಷಿಸುವ ಪರಿಸ್ಥಿತಿ ಇಲ್ಲ. ಆದರೆ, ಹೊರ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ಈಗಿನಿಂದಲೇ ಮುಂಜಾಗ್ರತೆ ವಹಿಸಬೇಕು.

ಝೀಕಾ ಬೆನ್ನಲ್ಲೇ ಈಗ Mpox ಭೀತಿ: ಆತಂಕ ಪಡುವ ಅಗತ್ಯವಿಲ್ಲ, ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸನ್ನದ್ಧ ಎಂದ ಸಚಿವ
ಸಚಿವ ದಿನೇಶ್ ಗುಂಡೂರಾವ್
Published On :

ಬೆಂಗಳೂರು: ಝೀಕಾ ವೈರಲ್ ಬೆನ್ನಲ್ಲೇ ರಾಜ್ಯದಲ್ಲಿ ಮಂಕಿ ಪಾಕ್ಸ್ ಆತಂಕ ಶುರುವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದ್ದಾರೆ.

ಹೊರದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾದ ಕಾರಣದಿಂದ ಆರೋಗ್ಯ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿ, ಮುಂಜಾಗೃತಾ ಕ್ರಮಗಳ ಕುರಿತು ಚರ್ಚೆ ನಡೆಸಿದರು.

ದೇಶದಲ್ಲಿ ಆರೋಗ್ಯ ತುರ್ತುಸ್ಥಿತಿ ಘೋಷಿಸುವ ಪರಿಸ್ಥಿತಿ ಇಲ್ಲ. ಆದರೆ, ಹೊರ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ಈಗಿನಿಂದಲೇ ಮುಂಜಾಗ್ರತೆ ವಹಿಸಬೇಕು. ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೇಲೆ ನಿಗಾ ಇರಿಸಬೇಕು. ಮಂಕಿಪಾಕ್ಸ್ ವೈರಾಣು ಗುಣಲಕ್ಷಣಗಳು ಕಂಡು ಬಂದರೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಒಂಬತ್ತು ಝೀಕಾ ಪ್ರಕರಣಗಳು ಪತ್ತೆಯಾಗಿದ್ದು, ಶಿವಮೊಗ್ಗದಲ್ಲಿ ಮೂರು ಹಾಗೂ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6 ಮಂದಿಗೆ ಝೀಕಾ ವೈರಾಣು ಸೋಂಕು ದೃಢಪಟ್ಟಿದೆ. ಈ ಪೈಕಿ 5 ಮಹಿಳೆಯರಿಗೆ ಸೋಂಕು ತಗುಲಿದ್ದು, ಇವರ ಸಂಪರ್ಕಕ್ಕೆ ಬಂದವರ ತಪಾಸಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.