HDK ಗೆ ಸಂಕಷ್ಟ: ದೋಷಾರೋಪ ಪಟ್ಟಿ ಸಲ್ಲಿಸಲು ರಾಜ್ಯಪಾಲರಿಗೆ SIT ಪತ್ರ!
2007ರಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ್ದಾರೆ.

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ.
2007ರಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ್ದಾರೆ ಎಂಬ ಆರೋಪವಿದೆ. ಈ ಪ್ರಕರಣ ಸಂಬಂಧ ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್ಐಟಿ (SIT) ರಾಜ್ಯಪಾಲರಿಗೆ ಪತ್ರ ಬರೆದಿದೆ.
ಅಕ್ರಮ ಗಣಿಗಾರಿಕೆ ಕುರಿತು 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್. ಸಂತೋಷ್ ಹೆಗ್ಡೆ ಅವರು ಸಲ್ಲಿಸಿದ್ದ ವರದಿ ಉಲ್ಲೇಖ ಆಧರಿಸಿ ಎಸ್ಐಟಿ ತನಿಖೆ ನಡೆಸುತ್ತಿದೆ. ಎಚ್ಡಿ ಕುಮಾರಸ್ವಾಮಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್ಐಟಿ 2023 ನವೆಂಬರ್ 21ರಂದು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಸಂಬಂಧ ಕೆಲವು ಸ್ಪಷ್ಟನೆಗಳನ್ನು ನೀಡುವಂತೆ ರಾಜ್ಯಪಾಲರು ಜುಲೈ 29ರಂದು ಎಸ್ಐಟಿಗೆ ಪತ್ರ ಬರೆದಿದ್ದರು.

ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ; ಮಂತ್ರಕ್ಕೆ ಮಾವಿನಕಾಯಿ ಉದುರಲ್ಲ: ಡಿ.ಕೆ.ಶಿವಕುಮಾರ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


