ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭರವಸೆ ಬೆನ್ನಲ್ಲೇ KARD ಮುಷ್ಕರ ಅಂತ್ಯ
ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿತ್ತು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆನ್ನಲ್ಲೇ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು (ಕೆಎಆರ್‌ಡಿ) ಮುಷ್ಕರವನ್ನು ಹಿಂದಕ್ಕೆ ಪಡೆದುಕೊಂಡಿದೆ.
ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿತ್ತು.
ಬುಧವಾರ ಬಾಗಲಕೋಟೆಗೆ ತೆರಳುವುದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂನಲ್ಲಿ ತಮ್ಮ ನಿವಾಸದಲ್ಲಿ ಕೆಎಆರ್‌ಡಿ ಸದಸ್ಯರನ್ನು ಭೇಟಿ ಮಾಡಿದರು.
ಈ ವೈದ್ಯರು, ವಾರಕ್ಕೆ 70-80 ಗಂಟೆಗಳ ಕಾಲ ಕೆಲಸ ಮಾಡಿದರೂ ನಮ್ಮಗಳಿಕೆ ಕಡಿಮೆಯಿದೆ ಎಂದು ಅಳಲು ತೋಡಿಕೊಂಡರು. ಶಿಷ್ಯವೇತನ ಹೆಚ್ಚಳಕ್ಕೆ ಮನವ ಮಾಡಿಕೊಂಡರು.
ಮಾತುಕತೆ ಬಳಿಕ ಮುಖ್ಯಮಂತ್ರಿಗಳು ಸ್ನಾತಕೋತ್ತರ ಪದವೀಧರರು ಮತ್ತು ಸೂಪರ್-ಸ್ಪೆಷಾಲಿಟಿ ನಿವಾಸಿ ವೈದ್ಯರಿಗೆ ಶಿಷ್ಯವೇತನವನ್ನು ಶೇ.25ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡಿದರು.
ಮುಖ್ಯಮಂತ್ರಿಗಳಿಂದ ಇನ್ನೂ ಅಧಿಕೃತ ಆದೇಶಗಳು ಬಂದಲ್ಲ. ಆದರೆ, ಭರವಸೆ ಬೆನ್ನಲ್ಲೇ ಮುಷ್ಕರ ವಾಪಸ್ ಪಡೆಯಲಾಗಿದೆ. ಇಂದಿನಿಂದ ಕೆಎಆರ್‌ಡಿ ಸದಸ್ಯರು ತಮ್ಮ ತಮ್ಮ ಸೇವೆಗಳನ್ನು ಪುನರಾರಂಭಿಸುತ್ತಾರೆಂದು ಕೆಎಆರ್‌ಡಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



