ಟಿ ನರಸೀಪುರದ ಹೊಟೇಲ್ ವೊಂದರಲ್ಲಿ ಸ್ಫೋಟಕ ಪತ್ತೆ: ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ
ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೈಸೂರು: ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.
ಮಾನವ-ಪ್ರಾಣಿ ಸಂಘರ್ಷ: ಕಲ್ಲು ಗಣಿಗಾರಿಕೆಗೆ ಮತ್ತು ಪ್ರಾಣಿಗಳ ಬೇಟೆಗೆ ಸ್ಫೋಟಕಗಳನ್ನು ಬಳಸಲು ತೆಗೆದುಕೊಂಡು ಹೋಗಿರಬಹುದು ಎಂದು ಸಂದೇಹಪಡಲಾಗಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದು, ಹೋಟೆಲ್ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿದ್ದಾರೆ. ಟಿ. ನರಸಿಪುರ ತಾಲೂಕಿನಲ್ಲಿ ಮಾನವ-ಪ್ರಾಣಿ ಸಂಘರ್ಷ ಆಗಾಗ ನಡೆಯುತ್ತಿರುತ್ತದೆ. ಪ್ರಾಣಿಗಳನ್ನು ಬೇಟೆಯಾಡಲು ಅಪರಿಚಿತರು ಸ್ಫೋಟಕಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ.
ಕಳೆದ ವರ್ಷ ಮೈಸೂರು ದಸರಾ ಮೇಲೆ ಉಗ್ರರ ಕರಿ ನೆರಳು ಬಿದ್ದು ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


