ಪಿಯುಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಉಚಿತ ನೀಟ್ ತರಬೇತಿ; ಮರು ಸಿಂಚನ ಕಾರ್ಯಕ್ರಮ ಜಾರಿ: ಸಚಿವ ಮಧು ಬಂಗಾರಪ್ಪ
ಈ ವರ್ಷದಿಂದಲೇ ಉಚಿವಾಗಿ ನೀಟ್ ತರಬೇತಿ ನೀಡಲಾಗುತ್ತದೆ. ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂಪಾಯಿ ಸರ್ಕಾರ ಖರ್ಚು ಮಾಡುತ್ತದೆ. ಆನ್ಲೈನ್ನಲ್ಲೂ ತರಬೇತಿ ನಡೆಯಲಿದೆ ಎಂದರು.

ಬೆಂಗಳೂರು: ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ನೀಟ್ (NEET) ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದಲೇ ಉಚಿವಾಗಿ ನೀಟ್ ತರಬೇತಿ ನೀಡಲಾಗುತ್ತದೆ. ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂಪಾಯಿ ಸರ್ಕಾರ ಖರ್ಚು ಮಾಡುತ್ತದೆ. ಆನ್ಲೈನ್ನಲ್ಲೂ ತರಬೇತಿ ನಡೆಯಲಿದೆ ಎಂದರು.
ಮರು ಸಿಂಚನ ಕಾರ್ಯಕ್ರಮ: 25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಶಿಕ್ಷಣ ಇಲಾಖೆ ಪರೀಕ್ಷೆ ನಡೆಯಲಿದೆ. ಪಾಸ್ ಆಗುವ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಅಲ್ಲದೆ, 8,9,10ನೇ ತರಗತಿ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮರು ಸಿಂಚನ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.
ಅನುದಾನಿತ ಶಾಲೆಯ ಎಲ್ಲ ಹುದ್ದೆಗಳಿಗೂ ಮುಂದಿನ ಐದು ವರ್ಷಗಳಲ್ಲಿ ಖಾಯಂ ಶಿಕ್ಷಕರ ನೇಮಕಾತಿ ಆಗಲಿದೆ. ಅನುದಾನಿತ ಕನ್ನಡ ಮಾಧ್ಯಮ ಶಾಲೆ ಉಳಿಸಬೇಕಾಗಿದೆ.ಅಂಗನವಾಡಿಯಲ್ಲೇ ಎಲ್ ಕೆಜಿ ಯುಕೆಜಿ ಪ್ರಾರಂಭ ಮಾಡಲಾಗಿದೆ.ಕಲ್ಯಾಣ ಕರ್ನಾಟಕದಲ್ಲಿಯೇ 1008 ಸಾವಿರ ಎಲ್ಕೆಜಿ ಹಾಗೂ ಯುಕೆಜಿ ನರ್ಸರಿ ತೆರೆಯಲಾಗುತ್ತದೆ. ಈಗಾಗಲೇ 30 ಸಾವಿರ ಮಕ್ಕಳು ದಾಖಲಾತಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಬ್ಯಾಗ್ ರಹಿತ ದಿನ: ಆದರ್ಶ ಶಾಲೆಗಳಲ್ಲಿ ಪಿಯುಸಿ ಕಾಲೇಜು ತೆರೆಯಲು ಅನುಮತಿ ನೀಡಲಾಗಿದೆ. ಇದರಿಂದ ಕಾಲೇಜು ಕೊರತೆ ನೀಗಿಸಲು ತೀರ್ಮಾನ ಮಾಡಿದ್ದೇವೆ. ತಿಂಗಳದ ಮೂರನೇ ಶನಿವಾರ ಬ್ಯಾಗ್ ರಹಿತ ದಿನ ಇರುತ್ತದೆ. ಶಿಕ್ಷಕರು ಕಡ್ಡಾಯವಾಗಿ ಇದನ್ನು ಪಾಲಿಸಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


