ಕೊಪ್ಪಳ: ಲಾರಿಗೆ ಕಾರು ಡಿಕ್ಕಿ, ಒಂದೇ ಕುಟುಂಬದ ಮೂವರ ಸಾವು
ಜಾಫರ್ ಅವರಿಗೆ ಪಾರ್ಶ್ವವಾಯು ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಕೊಡಿಸಲು ಒಂದೇ ಕುಟುಂಬದ ಆರು ಜನ ಓಮಿನಿ ವಾಹನದಲ್ಲಿ ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಅಲಗಾಕ್ಕೆ ತೆರಳಿದ್ದರು.

ಕೊಪ್ಪಳ: ತಾಲೂಕಿನ ಮಂಗಳಾಪುರ ಗ್ರಾಮದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಹುಬ್ಬಳ್ಳಿಯ ಹೆಬ್ಬಸೂರ ಗ್ರಾಮದ ಬಳಿ ಶುಕ್ರವಾರ ತಡ ರಾತ್ರಿ ಘಟನೆ ನಡೆದಿದೆ. ಓಮಿನಿ ಮತ್ತು ಲಾರಿ ನಡುವೆ ನಡೆದ ಅಪಘಾತ ನಡೆದಿದ್ದು, ಘಟನೆಯಲ್ಲಿ ಜಾಫರಸಾಬ ಮಂಗಳೂರು(60), ಮುಸ್ತಫಾ (36), ಶೊಹೇಬ್(6)ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಜಾಫರ್ ಅವರಿಗೆ ಪಾರ್ಶ್ವವಾಯು ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಕೊಡಿಸಲು ಒಂದೇ ಕುಟುಂಬದ ಆರು ಜನ ಓಮಿನಿ ವಾಹನದಲ್ಲಿ ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಅಲಗಾಕ್ಕೆ ತೆರಳಿದ್ದರು. ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಹೆಬಸೂರು ಬಳಿ ಆರು ಜನರಿದ್ದ ವಾಹನ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.
ಇದರಿಂದ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ. ಇನ್ನು ಮೂವರಿಗೆ ಗಂಭೀರ ಗಾಯವಾಗಿದ್ದು, ಎಸ್ಡಿಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಮಾಮ ಸಾಬ, ಹುಸೇನ ಬಾಷಾ, ಫೈಜಲ್ ಎಂಬುವವರು ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



