ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಕಾರು-KSRTC ಬಸ್ ಡಿಕ್ಕಿ, ಐವರಿಗೆ ಗಾಯ
ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಐವರಿಗೆ ಗಾಯವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಭಾನುವಾರ ನಡೆದಿದೆ.
ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ. ಕಾರಿನಲ್ಲಿದ್ದವರು ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದವರು ಎಂದು ಹೇಳಲಾಗುತ್ತಿದೆ.
ಗಾಯಾಳುಗಳಿಗೆ ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್‌ಗೆ ರವಾನೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಘಟನೆ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



