ಬೆಂಗಳೂರು: ಬಾಡಿಗೆ ಕಟ್ಟದ 2 ಅಂಚೆ ಕಚೇರಿಗಳಿಗೆ ಬೀಗ ಜಡಿದ BBMP
ಸೇಂಟ್ ಜಾನ್ಸ್ ರಸ್ತೆಯಲ್ಲಿ ಬಿಬಿಎಂಪಿ ಸ್ವತ್ತಿನ 1,665 ಚದರಡಿ ವಿಸ್ತೀರ್ಣದ ಮಳಿಗೆ ಯಲ್ಲಿರುವ ಅಂಚೆ ಕಚೇರಿ 2014ರ ಏಪ್ರಿಲ್‌ನಿಂದಲೂ ಹಳೆಯ ಬಾಡಿಗೆಯನ್ನೇ ಪಾವತಿಸುತ್ತಿದೆ.

ಬೆಂಗಳೂರು: ಲಕ್ಷಾಂತರ ರುಪಾಯಿ ಕಟ್ಟಡ ಬಾಡಿಗೆ ಪಾವತಿಸದೇ ಬಾಕಿ ಉಳಿಸಿಕೊಂಡ ನಗರದ 2 ಅಂಚೆ ಕಚೇರಿಗಳಿಗೆ ಬಿಬಿಎಂಪಿ ಬೀಗ ಹಾಕಿದೆ.
ಸೇಂಟ್ ಜಾನ್ಸ್ ರಸ್ತೆಯಲ್ಲಿ ಬಿಬಿಎಂಪಿ ಸ್ವತ್ತಿನ 1,665 ಚದರಡಿ ವಿಸ್ತೀರ್ಣದ ಮಳಿಗೆ ಯಲ್ಲಿರುವ ಅಂಚೆ ಕಚೇರಿ 2014ರ ಏಪ್ರಿಲ್‌ನಿಂದಲೂ ಹಳೆಯ ಬಾಡಿಗೆಯನ್ನೇ ಪಾವತಿಸುತ್ತಿದೆ. ಪರಿಷ್ಕೃತ ಬಾಡಿಗೆ ಪಾವತಿಸಲು ಹಲವು ಬಾರಿ ನೋಟಿಸ್ ನೀಡಿದ್ದರೂ ಸ್ಪಂದಿಸಿರಲಿಲ್ಲ. ಒಟ್ಟು 88.91 ಲಕ್ಷ ರೂ.ಬಾಡಿಗೆ ಬಾಕಿ ಇದೆ. ಹೀಗಾಗಿ, ಪೂರ್ವ ವಲಯ ಆಯುಕ್ತರ ಆದೇಶದಂತೆ ಪಾಲಿಕೆ ಸಿಬ್ಬಂದಿ ಸೋಮವಾರ ಬೆಳಿಗ್ಗೆ ಮಳಿಗೆಗೆ ಬೀಗ ಹಾಕಿದ್ದಾರೆ.
ವಸಂತನಗರ ಮಾರುಕಟ್ಟೆಯ ನೆಲ ಅಂತಸ್ತಿನಲ್ಲಿ 214 ಚದರಡಿ ಯಲ್ಲಿರುವ ಅಂಚೆ ಕಚೇರಿಯು 2016ರ ಜನವರಿಯಿಂದ ಪರಿಷ್ಕೃತ ಬಾಡಿಗೆಯನ್ನು ಪಾವತಿ ಸಿರಲಿಲ್ಲ. 10.80 ಲಕ್ಷ ರೂ. ಬಾಕಿ ಇದೆ. ಹೀಗಾಗಿ, ಸೋಮವಾರ ಬೆಳಿಗ್ಗೆ ಈ ಮಳಿಗೆಗೂ ಪಾಲಿಕೆ ಸಿಬ್ಬಂದಿ ಬೀಗ ಹಾಕಿದ್ದಾರೆ ಎಂದು ಪಾಲಿಕೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



