ರಾಜ್ಯ

ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳ ಹತ್ಯೆಗೈದಿದ್ದ ಮಲತಂದೆ ಬಂಧನ

ಹಿರಿಯ ಮಗಳು ಫೋನ್ ನಲ್ಲಿ ಮಾತನಾಡುತ್ತಿದ್ದು, ಊಟ ಬಡಿಸುವಂತೆ ಪದೇ ಪದೇ ಕೇಳಿದರೂ ಕಿವಿಗೊಡದ ಕಾರಣ ಕೋಪದಲ್ಲಿ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ.

ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳ ಹತ್ಯೆಗೈದಿದ್ದ ಮಲತಂದೆ ಬಂಧನ
ಸಂಗ್ರಹ ಚಿತ್ರ
Published On :

ಬೆಂಗಳೂರು: ಇಬ್ಬರು ಬಾಲಕಿಯರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಮಲತಂದೆಯನ್ನು ಅಮೃತಹಳ್ಳಿ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಕಾವೇರಿ ಲೇಔಟ್ ನಿವಾಸಿ ಕ್ಯಾಬ್ ಡ್ರೈವರ್ ಸುಮಿತ್ ಮೋಹನ್ (45) ಬಂಧಿತ ಆರೋಪಿ. ಹತ್ಯೆಗೀಡಾದ ಬಾಲಕಿಯನ್ನು ಸೃಷ್ಟಿ (14) ಹಾಗೂ ಸೋನಿಯಾ (16) ಎಂದು ಗುರ್ತಿಸಲಾಗಿದೆ. ಬಾಲಕಿಯರು ಕ್ರಮವಾಗಿ 8 ಮತ್ತು 9ನೇ ತರಗತಿ ಓದುತ್ತಿದ್ದರು.

ಹಿರಿಯ ಮಗಳು ಫೋನ್ ನಲ್ಲಿ ಮಾತನಾಡುತ್ತಿದ್ದು, ಊಟ ಬಡಿಸುವಂತೆ ಪದೇ ಪದೇ ಕೇಳಿದರೂ ಕಿವಿಗೊಡದ ಕಾರಣ ಕೋಪದಲ್ಲಿ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಬಳಿಕ ಕಿರಿಯ ಪುತ್ರಿಯನ್ನೂ ಹತ್ಯೆ ಮಾಡಿದ್ದಾನೆಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಬಾಲಕಿಯರ ಹತ್ಯೆ ಬಳಿಕ ಆರೋಪಿ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದ. ಭಾನುವಾರ ಯಶವಂತಪುರ ರೈಲ್ವೆ ನಿಲ್ದಾಣದ ಬಳಿಯ ಬಾರ್‌ನಲ್ಲಿ ಮದ್ಯ ಖರೀದಿಸಲು ಬಂದಿದ್ದಾನೆ. ಇದೇ ವೇಳೆ ಉತ್ತರ ಪ್ರದೇಶದ ತನ್ನ ಹುಟ್ಟೂರಿಗೆ ಪರಾರಿಯಾಗಲು ರೈಲ್ವೆ ಟಿಕೆಟ್‌ಗಳನ್ನು ಕಾಯ್ದಿರಿಸಲು ಫೋನ್ ಸ್ವಿಚ್ ಆನ್ ಮಾಡಿದ್ದಾನೆ. ಮೊಬೈಲ್ ಸ್ವಿಚ್ ಆಗುತ್ತಿದ್ದಂತೆಯೇ ಲೋಕೇಷನ್ ಕಂಡುಕೊಂಡ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.