ರಾಜ್ಯ

ನಟ ದರ್ಶನ್ ಸ್ವಾತಂತ್ರ್ಯ ಹೋರಾಟಗಾರನಲ್ಲ, He is a criminal: ಎಚ್. ವಿಶ್ವನಾಥ್ ಆಕ್ರೋಶ

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ವಿಶ್ವನಾಥ್, ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. ಹಿ ಇಸ್ ಎ ಕ್ರಿಮಿನಲ್‌. ಒಬ್ಬನನ್ನು ಕೊಲೆ ಮಾಡಿ ಬಂದವನು.

ನಟ ದರ್ಶನ್ ಸ್ವಾತಂತ್ರ್ಯ ಹೋರಾಟಗಾರನಲ್ಲ, He is a criminal: ಎಚ್. ವಿಶ್ವನಾಥ್ ಆಕ್ರೋಶ
ದರ್ಶನ್-ಎಚ್ ವಿಶ್ವನಾಥ್
Published On :

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿಸುವ ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. ಕೊಲೆ ಮಾಡಿ ಜೈಲು ಸೇರಿರುವ ಕ್ರಿಮಿನಲ್‌. ಆತನಿಗೆ ರಾಜೋಪಚಾರ ಮಾಡಬಾರದು ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ವಿಶ್ವನಾಥ್, ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. ಹಿ ಇಸ್ ಎ ಕ್ರಿಮಿನಲ್‌. ಒಬ್ಬನನ್ನು ಕೊಲೆ ಮಾಡಿ ಬಂದವನು. ಆತನಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಗೃಹಸಚಿವ ಪರಮೇಶ್ವರ್‌ ಏಕೆ ಮೌನವಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರು ನಗರಾ ಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂದಪಟ್ಟಂತೆ ಪ್ರತಿಕ್ರಿಯಿಸಿದ ವಿಶ್ವನಾಥ್‌, ಈ ವಿಚಾರವಾಗಿ ನಾನು ಮೌನವಾಗಿಲ್ಲ. ಹಾಗೆಂದು ಪ್ರತಿದಿನ ಮಾತನಾಡಲು ಸಾಧ್ಯವಿಲ್ಲ ಎಂದರು. ಮುಡಾದಿಂದ ಪಡೆದಿರುವ ನಿವೇಶನಗಳನ್ನು ವಾಪಸ್ ಕೊಡಿ ಎಂದು ಸಿಎಂ ಸಿದ್ದರಾಮಯ್ಯಗೆ ನಾನು ಮೊದಲೇ ಸಲಹೆ ನೀಡಿದ್ದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.