ತುಮಕೂರು: ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಸಾವು, ಹಲವರು ಅಸ್ವಸ್ಥ
ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಶನಿವಾರ ಆರಂಭವಾಯಿತು. ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ.

ತುಮಕೂರು: ಮಧುಗಿರಿ ತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟು, ಹಲವರು ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಮೃತರನ್ನು ಬುಳ್ಳಸಂದ್ರದ ನಿವಾಸಿಗಳಾದ ತಿಮ್ಮಕ್ಕ (80) ಮತ್ತು ಗಿರಿಯಮ್ಮ (86) ಮತ್ತು ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಸಿದ್ಧಗಿರಿ ಗ್ರಾಮದ ಕಾಟಮ್ಮ (45) ಎಂದು ಗುರುತಿಸಲಾಗಿದೆ.
ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಶನಿವಾರ ಆರಂಭವಾಯಿತು. ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.
ಜನರು ತಮ್ಮ ತಮ್ಮ ಮನೆಗಳಲ್ಲಿಯೇ ಆಹಾರ ಸಿದ್ಧಪಡಿಸಿ, ಜಾತ್ರೆಗೆ ತಂದಿದ್ದರು. ಮೂರು ಕುಟುಂಬಗಳು ತಯಾರಿಸಿದ ಆಹಾರ ಸೇವಿಸಿದವರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಸಹಾಯಕ ಆಯುಕ್ತ ಗೋಟೂರು ಶಿವಣ್ಣ ಹೇಳಿದ್ದಾರೆ.
ಘಟನೆ ಬೆನ್ನಲ್ಲೇ ಮಧುಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್, ಆರೋಗ್ಯಾಧಿಕಾರಿ ಶ್ರೀನಿವಾಸ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಯಾನಂದ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಇದೀಗ ಆಹಾರದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಶಿವಣ್ಣ ತಿಳಿಸಿದರು.
ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಕಲುಷಿತ ನೀರು ಕುಡಿದು ಏಳು ಮಂದಿ ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



