ಅನೈತಿಕ ಸಂಬಂಧ ಶಂಕೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಭೀಕರ ಕೊಲೆ
ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ 45 ವರ್ಷದ ರಾಮಕೃಷ್ಣ ಎಂಬುವರನ್ನು ತುಮಕೂರಿನ ಮಧುಗಿರಿ ನಿವಾಸಿ ರಮೇಶ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ 45 ವರ್ಷದ ರಾಮಕೃಷ್ಣ ಎಂಬುವರನ್ನು ತುಮಕೂರಿನ ಮಧುಗಿರಿ ನಿವಾಸಿ ರಮೇಶ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಕೊಲೆಯಾದ ರಾಮಕೃಷ್ಣ ವಿಮಾನ ನಿಲ್ದಾಣದಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದರು. ಇಂದು ಬಿಎಂಟಿಸಿ ಬಸ್ ನಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಮೇಶ್, ರಾಮಕೃಷ್ಣ ಜೊತೆ ಜಗಳವಾಡಿದ್ದಾನೆ. ನಂತರ ಚಾಕು ತೆಗೆದು ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ರಾಮಕೃಷ್ಣ ಮೃತಪಟ್ಟಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



