ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿ.ಕೆ ಶಿವಕುಮಾರ್
ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದರು. ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದರು

ಸಕಲೇಶಪುರ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಕಲೇಶಪುರದ ಹೆಬ್ಬನಹಳ್ಳಿ ಬಳಿ ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ನಂತರ ಮಾತನಾಡಿದ ಅವರು, ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದರು. ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದರು.
ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಮೇಲೆ ದೂರು ದಾಖಲಾಗಿರುವ ಬಗ್ಗೆ ಮಾತನಾಡಿದ ಶಿವಕುಮಾರ್ ಸಿಎಂ ಏನು ಮಾಡಿದ್ದಾರೆ ಎಂದು ಅವರ ಮೇಲೆ ಎಲ್ಲಾ ಏಕೆ ಮುಗಿಬೀಳುತ್ತಿದ್ದಾರೋ ನನಗೆ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಆಗುವುದಿಲ್ಲ. ಜಮೀನು ಕಳೆದುಕೊಂಡಿರುವುದಕ್ಕೆ ಪರಿಹಾರವಾಗಿ ಬಿಜೆಪಿಯವರೇ ನಿವೇಶನ ನೀಡಿದ್ದಾರೆ. ಸಿಎಂ ಅವರು ಎಲ್ಲೂ ಪ್ರಭಾವವನ್ನು ಬೀರಿಲ್ಲ, ಸಹಿಯನ್ನು ಮಾಡಿಲ್ಲ ಎಂದರು. ಜಮೀನನ್ನು ಡೀನೋಟಿಫಿಕೇಶನ್ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ " ನಕಲಿಗೆಲ್ಲ ನಾನು ಉತ್ತರ ಕೊಡುವುದಿಲ್ಲ. ಅಸಲಿಗೆ ಮಾತ್ರ ಉತ್ತರ ಕೊಡುತ್ತೇನೆ" ಎಂದು ತಿರುಗೇಟು ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



