ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ 2 ದಿನ ಭಾರೀ ಮಳೆ: IMD ಮುನ್ಸೂಚನೆ
ಮುಂದಿನ ಎರಡು ದಿನಗಳ ಕಾಲ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ನಂತರ ಮಳೆ ಕಡಿಮೆಯಾಗಲಿದೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ (ಜೂನ್ 1) ಆರಂಭವಾದಾಗಿನಿಂದ ಆಗಸ್ಟ್ 30 ರವರೆಗೆ ರಾಜ್ಯದಲ್ಲಿ ಶೇ. 20 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ.
ಬೆಂಗಳೂರಿನ ಐಎಂಡಿ ನಿರ್ದೇಶಕ ಎನ್ ಪುವಿಯರಸನ್ ಮಾತನಾಡಿ, ಜುಲೈನಲ್ಲಿ ಭಾರಿ ಮಳೆಯಾಗಿದೆ. ಆದರೆ ಆಗಸ್ಟ್ ನಲ್ಲಿ ಸಾಮಾನ್ಯ ಮಳೆಯಾಗಿದೆ ಎಂದು ವಿವರಣೆ ನೀಡಿದ್ದಾರೆ. IMD ಪ್ರಕಾರ, ಮುಂದಿನ ಎರಡು ದಿನಗಳ ಕಾಲ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ನಂತರ ಮಳೆ ಕಡಿಮೆಯಾಗಲಿದೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. 35-45 ಕಿಮೀ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ 55 ಕಿಮೀ ವೇಗದಲ್ಲಿ ಬೀಸಲಿದೆ ಎಂದು ತಿಳಿಸಿದೆ.
ಉತ್ತರ ಆಂಧ್ರ ಪ್ರದೇಶ ಮತ್ತು ದಕ್ಷಿಣ ಒಡಿಶಾದ ಪಶ್ಚಿಮ ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವಿದ್ದು, ಮುಂದಿನ 36 ಗಂಟೆಗಳಲ್ಲಿ ಪಶ್ಚಿಮ ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ ಎಂದು IMD ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



