Karnataka Rain: ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ ಗೋಡೆ
ಕಲಬುರಗಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಇದೇ ವೇಳೆ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದುಬಿದ್ದಿದೆ. ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದ್ದು, ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದೆ.

ಕಲಬುರಗಿ: ಕರ್ನಾಟಕದ ಹೆಮ್ಮೆಯ ಐತಿಹಾಸಿಕ ಸ್ಮಾರಕ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದು ಬಿದ್ದಿದ್ದು, ಇತಿಹಾಸಕಾರರ ಆಕ್ರೋಶಕ್ಕೆ ಕಾರಣವಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಇದೇ ವೇಳೆ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದುಬಿದ್ದಿದೆ. ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದ್ದು, ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದೆ.
ನಿಂರತ ಮಳೆಗೆ ಕೋಟೆ ಗೋಡೆಗಳು ತೇವಗೊಂಡಿದ್ದು, ಮಣ್ಣು ಸಡಿಲವಾಗಿ ಕಲ್ಲಿನ ಗೋಡೆ ಕುಸಿದುಬಿದ್ದಿದೆ. ಗೋಡೆ ಕುಸಿಯುತ್ತಿರುವ ವಿಡಿಯೋ ಸಾಮಾಜಿಕ ಲದ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಇನ್ನು ಗೋಡೆ ಕುಸಿತ ಪ್ರಕರಣದಿಂದ ಕೋಟೆ ಅಕ್ಕಪಕ್ಕದ ನಿವಾಸಿಗಳು ಆತಂಕಗೊಂಡು, ಬೆಚ್ಚಿಬಿದ್ದಿದ್ದಾರೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿಯಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಜೀರ್ಣೋದ್ಧಾರ ಮಾಡಿದ್ದ ಸರ್ಕಾರ
ರಾಷ್ಟ್ರಕೂಟರ ಕಾಲದಲ್ಲಿ ನಿರ್ಮಿಸಿದ್ದ ಕೋಟೆ ಐತಿಹಾಸಿಕವಾಗಿ ಮಹತ್ವ ಪಡೆದುಕೊಂಡಿದ್ದು, ರಾಷ್ಟ್ರಕೂಟರ ರಾಜ ಅಮೋಘವರ್ಷ ನೃಪತುಂಗ ಮಳಖೇಡ (ಮಾನ್ಯಖೇಟ) ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು. ಆಸ್ಥಾನದಲ್ಲಿದ್ದ ಕವಿ ಶ್ರೀವಿಜಯ 'ಕವಿರಾಜ ಮಾರ್ಗ' ಗ್ರಂಥ ಬರೆದಿದ್ದ. ಇದು ಕನ್ನಡದ ಮೊದಲ ಉಪಲಬ್ದ ಕೃತಿಯಾಗಿದೆ. ಇಂತಹ ಐತಿಹಾಸಿಕ ಚರೀತ್ರೆಯುಳ್ಳ ಮಳಖೇಡ ಕೋಟೆಯನ್ನು 2016-18ರ ಅವಧಿಯಲ್ಲಿ ಅಂದಿನ ಸಚಿವರಾಗಿದ್ದ ಡಾ.ಶರಣಪ್ರಕಾಶ ಪಾಟೀಲ ಅವರು 5 ಕೋಟಿ ರೂ ಅನುದಾನ ನೀಡಿ ಜೀರ್ಣೋದ್ಧಾರ ಮಾಡಿಸಿದ್ದರು.
ಜೊತೆಗೆ ಆಗಿನ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಅವರೂ ಕೂಡ1 ಕೋಟಿ ಅನುದಾನ ನೀಡಿದ್ದರು. 2018ರಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಪಾಟೀಲ ಅವರ ನೇತೃತ್ವದಲ್ಲಿ ಕೋಟೆ ಜೀರ್ಣೋದ್ಧಾರದ ಜೊತೆಗೆ ಸರ್ಕಾರದಿಂದ ರಾಷ್ಟ್ರಕೂಟರ ಉತ್ಸವ ಜರುಗಿತು. ಹಳೆ ಗೋಡೆಗಳು ಬಿದ್ದಿಲ್ಲ. ಆದರೆ,ಜೀರ್ಣೋದ್ಧಾರ ಮಾಡಿದ ಗೋಡೆಯೇ ಬಿದ್ದಿದ್ದು, ಜನರಲ್ಲಿ ಅಚ್ಚರಿ ಮೂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



