ರಾಜ್ಯ

ಇಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣ: 10 ಮಂದಿ ಆರೋಪಿಗಳ ಬಂಧನ

2024-25ನೇ ಸಾಲಿಗಾಗಿ ವಿವಿಧ ಸ್ನಾತಕ ಇಂಜಿನಿಯರಿಂಗ್ ಕೋರ್ಸ್ ಪ್ರವೇಶದ ವೇಳೆಯಲ್ಲಿ ಕೆಇಎ ಅಧಿಕಾರಿಯೊಬ್ಬರು ಸೀಟು ಬ್ಲಾಕಿಂಗ್ ಅನುಮಾನದ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಇಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣ: 10 ಮಂದಿ ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಇಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಬ್ಬಂದಿ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

2024-25ನೇ ಸಾಲಿಗಾಗಿ ವಿವಿಧ ಸ್ನಾತಕ ಇಂಜಿನಿಯರಿಂಗ್ ಕೋರ್ಸ್ ಪ್ರವೇಶದ ವೇಳೆಯಲ್ಲಿ ಕೆಇಎ ಅಧಿಕಾರಿಯೊಬ್ಬರು ಸೀಟು ಬ್ಲಾಕಿಂಗ್ ಅನುಮಾನದ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಂತರ ನವೆಂಬರ್ 13 ರಂದು ಈ ಹಗರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ಸಂದರ್ಭದಲ್ಲಿ ಮೂರು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಆಡಳಿತವನ್ನು ಪ್ರಶ್ನಿಸಲಾಗಿದೆ. ಹಗರಣ ಸಂಬಂಧ ಹತ್ತು ಜನರನ್ನು ಬಂಧಿಸಿದ್ದೇವೆ. ಅವರಲ್ಲಿ ಒಬ್ಬರು ಕೆಇಎ ಸಿಬ್ಬಂದಿ ಇದ್ದಾರೆ. ಇತರರಲ್ಲಿ ಮಧ್ಯವರ್ತಿಗಳು ಮತ್ತು ಕೆಲವು ಎಂಜಿನಿಯರಿಂಗ್ ಕಾಲೇಜುಗಳ ಕೆಲವು ಸಿಬ್ಬಂದಿ ಸೇರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳನ್ನು ಸೋಮವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನಂತರ ಅವರನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಕೆಇಎ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ವಂಚನೆ, ನಂಬಿಕೆ ದ್ರೋಹ, ಐಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಫ್‌ಐಆರ್ ಪ್ರಕಾರ, ಸೀಟು ತೆಗೆದುಕೊಳ್ಳುವ ಉದ್ದೇಶಹೊಂದಿಲ್ಲದ ಕೆಲವು ಅಭ್ಯರ್ಥಿಗಳನ್ನು ಕಾಲೇಜು ಆಯ್ಕೆ ನಮೂದಿಸಲು ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.