ಮುಡಾ ಅಕ್ರಮ ತನಿಖೆ ಪ್ರಗತಿ ಬಗ್ಗೆ ಲೋಕಾಯುಕ್ತಕ್ಕೆ ಇ.ಡಿ ಪತ್ರ ಸ್ವಾಗತಾರ್ಹ: ಬಿ.ವೈ ವಿಜಯೇಂದ್ರ
ಪ್ರಾಥಮಿಕ ಹಂತದಲ್ಲಿ ಇಡಿ ನಡೆಸಿದ ತನಿಖೆಯಲ್ಲಿ 700 ಕೋಟಿ ರೂ ಗೂ ಹೆಚ್ಚು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ. ಮುಡಾ ಅಕ್ರಮದ ಬಗ್ಗೆ ಎಳೆಎಳೆಯಾಗಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಜಾರಿ ನಿರ್ದೇಶನಾಲಯ ಬಿಡಿಸಿದೆ.

ಕಲಬುರಗಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಭೂ ಸ್ವಾಧೀನ ಪ್ರಕ್ರಿಯೆಯೇ ಅಕ್ರಮ ಎಂದು ಹೇಳಿದೆ. ಮುಡಾ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಲೋಕಾಯುಕ್ತ ಎಡಿಜಿಪಿಗೆ ತನಿಖೆಯ ಪ್ರಗತಿಯ ಬಗ್ಗೆ ಪತ್ರ ಬರೆದಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ವಾಗತಿಸಿದ್ದಾರೆ
ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರಾಥಮಿಕ ಹಂತದಲ್ಲಿ ಇಡಿ ನಡೆಸಿದ ತನಿಖೆಯಲ್ಲಿ 700 ಕೋಟಿ ರೂ.ಗೂ ಹೆಚ್ಚು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ. ಮುಡಾ ಅಕ್ರಮದ ಬಗ್ಗೆ ಎಳೆಎಳೆಯಾಗಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಜಾರಿ ನಿರ್ದೇಶನಾಲಯ ಬಿಡಿಸಿದೆ. ಸಿಎಂ ಪತ್ನಿಗೆ ಕೊಟ್ಟಿರುವ 14 ಸೈಟ್‌ಗಳು ಸಹ ಅಕ್ರಮ ಎಂದು ಇಡಿ ಉಲ್ಲೇಖಿಸಿದೆ ಎಂದು ಹೇಳಿದ್ದಾರೆ. ಲೋಕಾಯುಕ್ತ ಪೊಲೀಸರು ನಡೆಸಿದ ವಿಚಾರಣೆಯ ಬಗ್ಗೆಯೂ ವಿಜಯೇಂದ್ರ ಅನುಮಾನ ವ್ಯಕ್ತಪಡಿಸಿದ್ದಾರೆ. ಮುಡಾ ಹಗರಣವು ಕೇವಲ ಮುಖ್ಯಮಂತ್ರಿ ಕುಟುಂಬಕ್ಕೆ 14 ನಿವೇಶನ ಹಂಚಿಕೆಗೆ ಸೀಮಿತವಾಗಿಲ್ಲ ಎಂದು ನಾವು ಹೇಳುತ್ತಲೇ ಇದ್ದೇವೆ. ನೂರಾರು ಕೋಟಿ ರೂಪಾಯಿಗಳ ಹಗರಣ ಎಂದು ನಾನು ಈ ಹಿಂದೆಯೂ ಹೇಳಿದ್ದೆ ಎಂದು ಅವರು ತಿಳಿಸಿದರು.
ನನ್ನ ಹೇಳಿಕೆ ಕೇವಲ ಆರೋಪವಾಗಿರಲಿಲ್ಲ ಎಂಬುದು ಈಗ ಇಡಿ ತನಿಖೆಯಿಂದ ಸಾಬೀತಾಗಿದೆ ಎಂದು ಅವರು ಹೇಳಿದರು. ಜಾರಿ ನಿರ್ದೇಶನಾಲಯ ನಿಷ್ಪಕ್ಷಪಾತ ತನಿಖೆ ನಡೆಸಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ 700 ಕೋಟಿ ರೂ.ಗೂ ಹೆಚ್ಚು ಹಗರಣ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ. ಸಿಎಂ ಪತ್ನಿ ಪಾರ್ವತಿ ಬಿಎಂ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವುದನ್ನು ಇಡಿ ಪತ್ತೆ ಹಚ್ಚಿದೆ ಎಂದರು. ಕೇಂದ್ರ ಸಂಸ್ಥೆಯು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ಇತ್ತೀಚೆಗೆ ಬರೆದ ಪತ್ರದಲ್ಲಿ , ಮುಡಾ ಒಟ್ಟು 1,095 ಸೈಟ್‌ಗಳನ್ನು ಬೇನಾಮಿ ಮತ್ತು ಇತರರಿಗೆ ಕಾನೂನುಬಾಹಿರವಾಗಿ ಹಂಚಿಕೆ ಮಾಡಿದೆ ಎಂದು ತನ್ನ ತನಿಖೆಯಲ್ಲಿ ಕಂಡುಬಂದಿದೆ ಎಂದು ಹೇಳಿಕೊಂಡಿದೆ. ಸಿದ್ದರಾಮಯ್ಯ ಅವರ ಆಪ್ತ ಸಹಾಯಕರಲ್ಲಿ ಒಬ್ಬರಾದ ಎಸ್ ಜಿ ದಿನೇಶ್ ಕುಮಾರ್ ಅಲಿಯಾಸ್ ಸಿಟಿ ಕುಮಾರ್ ಅವರು ಈ ಪ್ರಕ್ರಿಯೆಯಲ್ಲಿ ಅನಗತ್ಯ ಪ್ರಭಾವ ಬೀರಿದ್ದಾರೆ ಎಂಬುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಸಂಸ್ಥೆ ತಿಳಿಸಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


