ಚಳಿಗಾಲದ ಅಧಿವೇಶನ: ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ವಿಮಾನ ಸಂಚಾರ
ಇಂಡಿಗೋ ಏರ್‌ಲೈನ್ಸ್ ಡಿಸೆಂಬರ್ 9 ರಿಂದ 19 ರವರೆಗೆ ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ಏರ್‌ಬಸ್ A320 ವಿಮಾನ ಸಂಚರಿಸಲಿದೆ ಎಂದು ಘೋಷಿಸಿದೆ.

ಬೆಂಗಳೂರು: ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳುವ ಶಾಸಕರು ಮತ್ತು ಅಧಿಕಾರಿಗಳಿಗೆ ಅನುಕೂಲಕ್ಕಾಗಿ ಬೆಳಗಾವಿ - ಬೆಂಗಳೂರು ನಡುವೆ ವಿಶೇಷ ವಿಮಾನ ಸಂಚರಿಸಲಿದೆ.
ಇಂಡಿಗೋ ಏರ್‌ಲೈನ್ಸ್ ಡಿಸೆಂಬರ್ 9 ರಿಂದ 19 ರವರೆಗೆ ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ಏರ್‌ಬಸ್ A320 ವಿಮಾನ ಸಂಚರಿಸಲಿದೆ ಎಂದು ಘೋಷಿಸಿದೆ.
ವೇಳಾಪಟ್ಟಿಯ ಪ್ರಕಾರ, ಇಂಡಿಗೋ ವಿಮಾನ ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ 6 ಗಂಟೆಗೆ ಹೊರಟು ಬೆಳಗ್ಗೆ 7 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತದೆ.
ನಂತರ ಅದೇ ವಿಮಾನ ಬೆಳಗಾವಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 7:30 ಕ್ಕೆ ಹೊರಟು ಬೆಳಗ್ಗೆ 8:30 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಲುಪಲಿದೆ ಎಂದು ಇಂಡಿಗೋ ತಿಳಿಸಿದೆ.
ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಮತ್ತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅಧಿವೇಶನದ ಸಮಯದಲ್ಲಿ ಬೆಳಗಾವಿ ಮತ್ತು ಬೆಂಗಳೂರು ನಡುವೆ ವಿಶೇಷ ವಿಮಾನ ಸಂಚಾರಕ್ಕೆ ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



