110 ಗ್ರಾಮಗಳಲ್ಲಿ ಕಾವೇರಿ ಸಂಪರ್ಕ ಅಭಿಯಾನ: ಜನರಿಗೆ ಮಾಹಿತಿ
ಜನರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಪ್ರಚಾರ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಬೆಂಗಳೂರು: ಬೆಂಗಳೂರು ಸುತ್ತಮುತ್ತಲಿನ 110 ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕದ ಬಗ್ಗೆ ಮಾಹಿತಿ ನೀಡುವಂತೆ ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನದಂತೆ ಮನೋಹರ್ ಬುಧವಾರ ಪೂರ್ವ ವಲಯದ ಚಳ್ಳಗೆರೆ ಮತ್ತು ಚನ್ನಸಂದ್ರ ಭಾಗದಲ್ಲಿ ಮಂಡಳಿ ವತಿಯಿಂದ ಆಯೋಜಿಸಿದ್ದ ಕಾವೇರಿ ಸಂಪರ್ಕ ಅಭಿಯಾನದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
110 ಗ್ರಾಮಗಳಿಗೆ ಸಮರ್ಪಕ ನೀರು ಒದಗಿಸಲು ಬಿಡಬ್ಲ್ಯುಎಸ್‌ಎಸ್‌ಬಿ ಸಿದ್ಧವಿದೆ.ಈಗಾಗಲೇ ನಗರಕ್ಕೆ ಹೆಚ್ಚುವರಿ ನೀರು ಪೂರೈಕೆಯಾಗುತ್ತಿದೆ. ಜನರು ಇದರ ಪ್ರಯೋಜನ ಪಡೆಯಲು ಸಂಪರ್ಕ ಪಡೆಯುವುದು ಅವಶ್ಯ. ಕೊಳವೆಬಾವಿ ಕೊರತೆಯಂತಹ ಸಮಸ್ಯೆಗಳು ಬರದಂತೆ ಜನರು ಕುಡಿಯುವ ನೀರಿನ ಸಂಪರ್ಕ ಪಡೆಯಬೇಕು. ಬೇಸಿಗೆಯಲ್ಲಿ ನೀರಿನ ಕೊರತೆ ಮರುಕಳಿಸದಂತೆ ಎಲ್ಲಾ 110 ಹಳ್ಳಿಗಳಲ್ಲಿ ಮನೆ-ಮನೆಗೆ ಕಾವೇರಿ ಸಂಪರ್ಕ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಜನರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಪ್ರಚಾರ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದರು.
ಮುಂದಿನ ದಿನಗಳಲ್ಲಿ ಕಾವೇರಿ ಕುಡಿಯುವ ನೀರು ಸಂಪರ್ಕ ಅಭಿಯಾನದ ಭಿತ್ತಿಪತ್ರ, ಮನೆ ಬಾಗಿಲಿಗೆ ಅರ್ಜಿ, ಠೇವಣಿ ಶುಲ್ಕದ ವಿವರ ಸೇರಿದಂತೆ ಮಾಹಿತಿ ನೀಡಲು ಮಂಡಳಿ ನಿರ್ಧರಿಸಿದೆ. ಬಿಡಬ್ಲ್ಯೂಎಸ್‌ಎಸ್‌ಬಿ ಕಾರ್ಯಕರ್ತರಿಗೆ ಮನೆ ಮನೆಗೆ ಹೋಗಿ ಇವುಗಳನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ ಮತ್ತು ಪ್ರಚಾರದ ಸ್ಥಳ, ದಿನಾಂಕ ಮತ್ತು ಸಮಯದ ಬಗ್ಗೆ ಜನರಿಗೆ ತಿಳಿಸಲಾಗಿದೆ ಎಂದು ಮನೋಹರ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



