ಬಸವರಾಜ ಹೊರಟ್ಟಿ ವಿರುದ್ಧ ಕೇಸ್ ದಾಖಲಿಸದ ಡಿಜಿಪಿ ಅಲೋಕ್ ಮೋಹನ್, ಎಸ್ಪಿಗೆ ನೋಟಿಸ್
ಡಿಜಿಪಿ ಅಲೋಕ್ ಮೋಹನ್ ಮತ್ತು ಎಸ್‌ಪಿ ಗೋಪಾಲ ಬ್ಯಾಕೋಡ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, 12 ರಂದು ಎಸ್ಟಿ ಆಯೋಗದ ಮುಂದೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ಅಧಿಕಾರ ದುರುಪಯೋಗಪಡಿಸಿಕೊಂಡ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರಾಕರಿಸಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)ರಿಗೆ ಮತ್ತು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನೋಟಿಸ್ ಜಾರಿ ಮಾಡಿದೆ.
ಬಸವರಾಜ ಹೊರಟ್ಟಿ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮ ಎಸಗಿದ್ದು, ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಧಾರವಾಡದ ಅರುಣ್ ಹಿರೇಹಾಳ ಎಂಬುವವರು ನೀಡಿದ ದೂರಿನ ಮೇರೆಗೆ ನೋಟಿಸ್ ಜಾರಿ ಮಾಡಲಾಗಿದೆ.
ಎಸ್ ಸಿಎಸ್ ಟಿ ಡಿಜಿಪಿ ಅಲೋಕ್ ಮೋಹನ್ ಮತ್ತು ಎಸ್‌ಪಿ ಗೋಪಾಲ ಬ್ಯಾಕೋಡ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, 12 ರಂದು ಎಸ್ಟಿ ಆಯೋಗದ ಮುಂದೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಸವರಾಜ ಹೊರಟ್ಟಿ ಅವರು ಚುನಾಯಿತ ಪ್ರತಿನಿಧಿಯಾಗಿದ್ದು, ಆರ್. ಎನ್ ಪೂಜಾರ್ ಅವರು ಪರಿಶಿಷ್ಟ ಪಂಗಡದವರೆಂಬುವುದನ್ನು ತಿಳಿದು ಅವರ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು 2009ರಲ್ಲಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಧಾರವಾಡದ ಸರ್ವೋದಯ ಶಿಕ್ಷಣ ಟ್ರಸ್ಟ್ ಅನ್ನು ತಮ್ಮ ಹೆಸರಿಗೆ ನೋಂದಣಿ ಮಾಡಿಸಿದ್ದಾರೆ ಎಂದು ದೂರುದಾರ ಅರುಣ್ ಹಿರೇಹಾಳ ಆರೋಪಿಸಿದ್ದಾರೆ.
"ಈ ಕಾಯ್ದೆಯು ಕಾನೂನುಬಾಹಿರವಾಗಿದೆ ಮತ್ತು ಪರಿಶಿಷ್ಟ ಪಂಗಡಗಳನ್ನು ಆರ್ಥಿಕವಾಗಿ ಹೊರಗಿಡುವಿಕೆಗೆ ಕಾರಣವಾಗಿದೆ. ಇದು ಪರಿಶಿಷ್ಟ ಪಂಗಡಗಳು ಮತ್ತು ಇತರರನ್ನು ಶೋಷಣೆಗೆ ಒಳಪಡಿಸಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಟ್ರಸ್ಟ್‌ನ ಸೇವೆಗಳಿಂದ ಪ್ರಯೋಜನ ಪಡೆಯುವ ಅರ್ಹತೆ ಹೊಂದಿರುವ ಪರಿಶಿಷ್ಟ ಪಂಗಡಗಳಿಗೆ ಆರ್ಟಿಕಲ್ 14 ರ ಅಡಿಯಲ್ಲಿ ಎಲ್ಲಾ ಹಕ್ಕುಗಳನ್ನು ನಿರಾಕರಿಸಲಾಗಿದೆ" ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



