ಬೆಂಗಳೂರು: 3 ವಲಯಗಳಲ್ಲಿ ಫುಟ್‌ಪಾತ್ ಒತ್ತುವರಿ, ಅನಧಿಕೃತ ಕೇಬಲ್‌ಗಳ ತೆರವು
ದಕ್ಷಿಣ ವಲಯದ ಜಯನಗರ 1ನೇ ಬ್ಲಾಕ್ ನ 3ನೇ ಅಡ್ಡರಸ್ತೆ, ಲಕ್ಕಸಂದ್ರ ವಾರ್ಡ್ ನ 16ನೇ ಅಡ್ಡರಸ್ತೆ ಹಾಗೂ ರಾಜರಾಜೇಶ್ವರಿನಗರ ವಲಯದ ನಾಗರಭಾವಿ 2ನೇ ಹಂತದ 6ನೇ ಅಡ್ಡರಸ್ತೆಯಲ್ಲಿ ಒತ್ತುವರಿ ತೆರವುಗೊಳಿಸಲಾಯಿತು.

ಬೆಂಗಳೂರು: ನಗರದ ಮೂರು ವಿವಿಧ ವಲಯಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಪಾದಚಾರಿಗಳ ಅತಿಕ್ರಮಣ ಹಾಗೂ ಅನಧಿಕೃತ ಕೇಬಲ್ ಗಳ ತೆರವು ಕಾರ್ಯಾಚರಣೆಯನ್ನು ಶನಿವಾರ ನಡೆಸಿತು.
ಆಯಾ ವಲಯಗಳಲ್ಲಿನ ಪಾದಚಾರಿ ಮಾರ್ಗಗಳನ್ನು ಪರಿಶೀಲಿಸಿದ ನಂತರ ಅತಿಕ್ರಮಣದಿಂದ ಪಾದಚಾರಿಗಳಿಗೆ ಆಗುತ್ತಿರುವ ತೊಂದರೆಗಳನ್ನು ಗಮನಿಸಲಾಯಿತು. ಈ ವೇಳೆ ಅನಧಿಕೃತ ಕೇಬಲ್‌ಗಳು ನಗರದ ಸೌಂದರ್ಯಕ್ಕೆ ಧಕ್ಕೆ ತರುತ್ತಿರುವುದಲ್ಲದೆ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ನಿವಾಸಿಗಳು ದೂರಿದರು.
ಬಳಿಕ ವಲಯ ಆಯುಕ್ತರು ಮತ್ತು ಜಂಟಿ ಆಯುಕ್ತರ ನಿರ್ದೇಶನಗಳನ್ನು ಅನುಸರಿಸಿ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು.
ದಕ್ಷಿಣ ವಲಯದ ಜಯನಗರ 1ನೇ ಬ್ಲಾಕ್ ನ 3ನೇ ಅಡ್ಡರಸ್ತೆ, ಲಕ್ಕಸಂದ್ರ ವಾರ್ಡ್ ನ 16ನೇ ಅಡ್ಡರಸ್ತೆ ಹಾಗೂ ರಾಜರಾಜೇಶ್ವರಿನಗರ ವಲಯದ ನಾಗರಭಾವಿ 2ನೇ ಹಂತದ 6ನೇ ಅಡ್ಡರಸ್ತೆಯಲ್ಲಿ ಒತ್ತುವರಿ ತೆರವುಗೊಳಿಸಲಾಯಿತು.
ಅಲ್ಲದೆ, ಮಹದೇವಪುರ ವಲಯದ ಹಳೆ ವಿಮಾನ ನಿಲ್ದಾಣ ರಸ್ತೆ, ಮಾರತ್ತಹಳ್ಳಿ ಸೇತುವೆ ಮುಖ್ಯರಸ್ತೆಯಲ್ಲಿನ ಅತಿಕ್ರಮಣ ಹಾಗೂ ಅನಧಿಕೃತ ಓವರ್‌ಹೆಡ್ ಕೇಬಲ್‌ಗಳನ್ನು ತೆರವುಗೊಳಿಸಲಾಯಿತು.
ವಲಯ ಆಯುಕ್ತರು ಹಾಗೂ ಜಂಟಿ ಆಯುಕ್ತರ ನಿರ್ದೇಶನದಂತೆ ಪಾದಚಾರಿ ಮಾರ್ಗದಲ್ಲಿದ್ದ ಅಂಗಡಿಗಳನ್ನು ತೆರವು ಮಾಡಲಾಗಿದ್ದು, ಪಾದಚಾರಿ ಮಾರ್ಗಗಳಲ್ಲಿ ಶಾಶ್ವತ ಪೆಟ್ಟಿಗೆಗಳನ್ನು ತೆರವು ಮಾಡಿ, ಮತ್ತೆ ವ್ಯಾಪಾರ ಮಾಡದಂತೆ ಕಟ್ಟೆಚ್ಚರ ನೀಡಲಾಗುತ್ತಿದೆ ಎಂದು ಪಾಲಿಕೆ ಎಂಜಿನಿಯರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



