ರಾಜ್ಯ

ಬಾಣಂತಿಯರ ಸಾವು: ಮೂರು ತಿಂಗಳ ವರದಿ ಕೇಳಿದ್ದೇವೆ- ಲಕ್ಷ್ಮಿ ಹೆಬ್ಬಾಳ್ಕರ್

ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿರುವ ಘಟನೆ ಕಳಪೆ ಗುಣಮಟ್ಟದ ಔಷಧಿ ಪೂರೈಕೆಯಿಂದ ಆಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

ಬಾಣಂತಿಯರ ಸಾವು: ಮೂರು ತಿಂಗಳ ವರದಿ ಕೇಳಿದ್ದೇವೆ- ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್
Published On :

ಬೆಂಗಳೂರು: ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣ ಕುರಿತು ಸಂಪೂರ್ಣ ವರದಿ ಕೇಳಿದ್ದು, ಸಮಗ್ರ ತನಿಖೆ ನಡೆಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿರುವ ಘಟನೆ ಕಳಪೆ ಗುಣಮಟ್ಟದ ಔಷಧಿ ಪೂರೈಕೆಯಿಂದ ಆಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈಗಾಗಲೇ ಔಷಧಿಯನ್ನು ಕಪ್ಪು ಪಟ್ಟಿಗೆ ಸೇರಿಸಿದ್ದೇವೆ. ತನಿಖೆ ನಡೆಯುತ್ತಿದೆ. ಆ ಕಂಪೆನಿ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದರು.

ಬಾಣಂತಿಯರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಲು 3 ತಿಂಗಳ ವರದಿ ಕೇಳಿದ್ದೇವೆ, ಮಹಿಳಾ ಇಲಾಖೆಯಿಂದ ಪೌಷ್ಠಿಕಾಂಶ ಆಹಾರ ಪೂರೈಕೆಯಾಗುತ್ತಿದೆಯೇ ಎಂದು ಸಹ ಪರಿಶೀಲಿಸುತ್ತಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.