ರಾಜ್ಯ

ಬಾಣಂತಿಯರ ಸಾವು: ಔಷಧ ಸರಬರಾಜು ಕಂಪನಿ ಕಪ್ಪುಪಟ್ಟಿಗೆ ಸೇರಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಶೀಘ್ರದಲ್ಲೇ ಕ್ರಮ- ಸಿಎಂ

ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ.

ಬಾಣಂತಿಯರ ಸಾವು: ಔಷಧ ಸರಬರಾಜು ಕಂಪನಿ ಕಪ್ಪುಪಟ್ಟಿಗೆ ಸೇರಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಶೀಘ್ರದಲ್ಲೇ ಕ್ರಮ- ಸಿಎಂ
ಸಿಎಂ ಸಿದ್ದರಾಮಯ್ಯ
Published On :

ಚಾಮರಾಜನಗರ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಲು ಸೂಚಿಸಲಾಗಿದ್ದು, ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಕೊಳ್ಳೇಗಾಲ ತಾಲೂಕಿನ ನರಿಪುರ ಹೆಲಿಪ್ಯಾಡ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ಕು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು. ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆದಿದೆ. ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದರು.

ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಲು ಸೂಚಿಸಿದ್ದೇನೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.