Namma Metro: ಹಳದಿ ಮಾರ್ಗದ ಬೊಮ್ಮಸಂದ್ರ ನಿಲ್ದಾಣಕ್ಕೆ Delta Electronics ಹೆಸರು ನಾಮಕರಣ
ಮುಂದಿನ 30 ವರ್ಷದವರೆಗೆ ಈ ನಿಲ್ದಾಣಕ್ಕೆ ತನ್ನ ಹೆಸರನ್ನು ನಾಮಕರಣ ಮಾಡಿಕೊಳ್ಳುವ ಹಕ್ಕು ಪಡೆದಿದ್ದು, ಕಂಪನಿಯು ಬಿಎಂಆರ್‌ಸಿಎಲ್‌ಗೆ ರೂ. 65 ಕೋಟಿ ಪಾವತಿಸಿದೆ.

ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದ ಬೊಮ್ಮಸಂದ್ರ ರೈಲು ನಿಲ್ದಾಣಕ್ಕೆ ತನ್ನ ಹೆಸರನ್ನು ನಾಮಕರಣ ಮಾಡಿಕೊಳ್ಳಲು ತೈವಾನ್‌ನ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕಂಪನಿ ಡೆಲ್ಟಾ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ನಡುವೆ ಸೋಮವಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಈ ಮೂಲಕ ಮುಂದಿನ 30 ವರ್ಷದವರೆಗೆ ಈ ನಿಲ್ದಾಣಕ್ಕೆ ತನ್ನ ಹೆಸರನ್ನು ನಾಮಕರಣ ಮಾಡಿಕೊಳ್ಳುವ ಹಕ್ಕು ಪಡೆದಿದ್ದು, ಕಂಪನಿಯು ಬಿಎಂಆರ್‌ಸಿಎಲ್‌ಗೆ ರೂ. 65 ಕೋಟಿ ಪಾವತಿಸಿದೆ. ಹಳದಿ ಮಾರ್ಗದ ನಿಲ್ದಾಣಕ್ಕೆ ಹೆಸರಿಡುವುದಕ್ಕೆ ಮಾಡಿಕೊಂಡ ಮೂರನೇ ಒಪ್ಪಂದ ಇದಾಗಿದೆ. ಇನ್ಫೋಸಿಸ್ ಫೌಂಡೇಶನ್ ಕೊನ್ನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣಕ್ಕೆ ಸಹಿ ಹಾಕಿದರೆ, ಬಯೋಕಾನ್ ಫೌಂಡೇಶನ್ ಹೆಬ್ಬಗೋಡಿ ನಿಲ್ದಾಣಕ್ಕೆ ಒಪ್ಪಂದ ಮಾಡಿಕೊಂಡಿದೆ.
ಇನೋವೇಟಿವ್ ಫೈನಾನ್ಸಿಂಗ್ ಮೆಕ್ಯಾನಿಸಂ ಯೋಜನೆಯಡಿ ಈ ಒಪ್ಪಂದವಾಗಿದ್ದು, ರಾಜ್ಯ ಸರ್ಕಾರದ ಅನುಮೋದನೆ ಪಡೆಯಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ರೂ.10 ಕೋಟಿ ಮೊತ್ತವನ್ನು ಈಗಾಗಲೇ ಪಾವತಿಸಲಾಗಿದ್ದು, ಉಳಿದ ಮೊತ್ತ ರೂ. 55 ಕೋಟಿಯನ್ನು ಇಂದು ಪಾವತಿಸಲಾಗಿದೆ ಎಂದು ತಿಳಿಸಲಾಗಿದೆ. ಸುಸ್ಥಿರ ನಗರಾಭಿವೃದ್ಧಿ ಮತ್ತು ನಗರ ಸಾರಿಗೆಯ ಬೆಂಬಲಕ್ಕೆ ಡೆಲ್ಟಾ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮುಂದೆ ಬಂದಿರುವುದು ತುಂಬಾ ಸಂತೋಷವಾಗಿದೆ ಎಂದು BMRCL ವ್ಯವಸ್ಥಾಪಕ ನಿರ್ದೇಶಕ M. ಮಹೇಶ್ವರ್ ರಾವ್ ತಿಳಿಸಿದ್ದಾರೆ.
ಡೆಲ್ಟಾ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಅಧ್ಯಕ್ಷ ಬೆಂಜಮಿನ್ ಲಿನ್ ಮತ್ತು ವ್ಯವಸ್ಥಾಪಕ ನಿರ್ದೇಶಕ ನಿರಂಜನ್ ನಾಯಕ್ ಮಾತನಾಡಿ, ಹೊಸೂರು ರಸ್ತೆಯಲ್ಲಿ ಬೊಮ್ಮಸಂದ್ರ ಮೆಟ್ರೋ ನಿಲ್ದಾಣದ ನಿರ್ಮಾಣಕ್ಕಾಗಿ ನಾವು BMRCL ನೊಂದಿಗೆ ಪಾಲುದಾರಿಕೆ ಹೊಂದಲು ಸಂತೋಷಪಡುತ್ತೇವೆ. ಈ ಯೋಜನೆಯು ಸಾರ್ವಜನಿಕ ಸಾರಿಗೆಯ ಹೆಚ್ಚಿನ ಬಳಕೆಯನ್ನು ಸಕ್ರಿಯಗೊಳಿಸುವ ಮೂಲಕ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



