ರಾಜ್ಯ

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬಲಿಯಾಯ್ತು ಮೂರು ಜೀವ; ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ತಾಯಿಯೂ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಸಿಕ್ಕಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ.

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬಲಿಯಾಯ್ತು ಮೂರು ಜೀವ; ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
Published On :

ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ತಾಯಿಯು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ನಡೆದಿದೆ. ಮೃತ ತಾಯಿಯನ್ನು 35 ವರ್ಷದ ಕುಸುಮಾ ಹಾಗೂ ಮಕ್ಕಳಾದ 6 ವರ್ಷದ ಶ್ರೀಯಾನ್ ಮತ್ತು ಒಂದೂವರೆ ವರ್ಷದ ಚಾರ್ವಿ ಎಂದು ಗುರುತಿಸಲಾಗಿದೆ. ಕೊಡಿಗೆಹಳ್ಳಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ದಂಪತಿ ಸುರೇಶ್, ಕುಸುಮಾ ವಾಸವಾಗಿದ್ದರು.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ತಾಯಿಯೂ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಸಿಕ್ಕಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಡುಗೆಹಳ್ಳಿ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.