ರಾಜ್ಯ

ಸಾರ್ವಜನಿಕರಿಗೆ ತೊಂದರೆ ಆದ್ರೆ ಸರ್ಕಾರ ಕಣ್ಣುಮುಚ್ಚಿ ಕೂರುವುದಿಲ್ಲ: ಲಾಠಿ ಚಾರ್ಜ್ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಮಂಗಳವಾರ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು.

ಸಾರ್ವಜನಿಕರಿಗೆ ತೊಂದರೆ ಆದ್ರೆ ಸರ್ಕಾರ ಕಣ್ಣುಮುಚ್ಚಿ ಕೂರುವುದಿಲ್ಲ: ಲಾಠಿ ಚಾರ್ಜ್ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ವಿಜಯಪುರ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡು ಜನರಿಗೆ ತೊಂದರೆ ನೀಡಿದರೆ ಸರ್ಕಾರ ಕಣ್ಣುಮುಚ್ಚಿ ಕೂರುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

ಮಂಗಳವಾರ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಹಲವರು ಗಾಯಗೊಂಡಿದ್ದರು.

ಪಂಚಮಸಾಲಿ ಸಮುದಾಯದವರು 2ಎ ಪ್ರವರ್ಗದಡಿ ಮೀಸಲಾತಿಗೆ ಆಗ್ರಹಿಸಿ ಧರಣಿ ನಡೆಸುವುದರಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಆದರೆ ಪ್ರತಿಭಟನೆ ಶಾಂತಿಯುತವಾಗಿರಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದ ಸಿಎಂ, ಯಾರಾದರೂ ಕಾನೂನನ್ನು ಕೈಗೆ ತೆಗೆದುಕೊಂಡು ಜನರಿಗೆ ತೊಂದರೆ ಕೊಟ್ಟರೆ ಸರ್ಕಾರ ಕಣ್ಣು ಮುಚ್ಚಿ ಕೂರುವುದಿಲ್ಲ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

ಪಂಚಮಸಾಲಿ ಸಮುದಾಯವು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ. 15 ರಷ್ಟು ಮೀಸಲಾತಿಯನ್ನು ಹೊಂದಿರುವ 2Aಗೆ ಸೇರಿಸಬೇಕು ಎಂದು ಒತ್ತಾಯಿಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.