ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಪತ್ನಿ, ಭಾಮೈದ ಸೇರಿ ಮೂವರ ಬಂಧನ
ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ ನಿಶಾ ಹಾಗೂ ಅನುರಾಗ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತರನ್ನು ಅತುಲ್ ಪತ್ನಿ, ಎ1 ಆರೋಪಿ ನಿಖಿತಾ ಸಿಂಘಾನಿಯ, ಅತ್ತೆ ಎ2 ಆರೋಪಿ ನಿಶಾ ಸಿಂಘಾನಿಯಾ, ಭಾಮೈದ ಎ3 ಆರೋಪಿ ಅನುರಾಗ್ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ.
ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ ನಿಶಾ ಹಾಗೂ ಅನುರಾಗ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂವರು ಆರೋಪಿಗಳನ್ನೂ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಅತುಲ್ ಸುಭಾಷ (34 ವರ್ಷ) ಡೆತ್ನೋಟ್ ಬರೆದಿಟ್ಟು ಡಿಸೆಂಬರ್ 9ರಂದು ಬೆಂಗಳೂರಿನ ಮಂಜುನಾಥ ಲೇಔಟ್ನ ಪ್ಲಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ತನಗೆ ಪತ್ನಿ ಮತ್ತು ಆಕೆಯ ಸಂಬಂಧಿಕರು ನೀಡಿರುವ ಕಿರುಕುಳದ ಬಗ್ಗೆ 90 ನಿಮಿಷಗಳ ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹರಿಬಿಟ್ಟಿದ್ದರು. ಈ ಸಂಬಂಧ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



