ರಾಜ್ಯ

ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬಿಜೆಪಿಗೆ ಆಸಕ್ತಿ ಇಲ್ಲ: ಡಿ.ಕೆ ಶಿವಕುಮಾರ್

ಮಹದಾಯಿ ಯೋಜನೆ ವಿಚಾರವಾಗಿ ಸಂಭ್ರಮಾಚರಣೆ ಮಾಡಿದ್ದು ಜಗದೀಶ್ ಶೆಟ್ಟರ್ ಹಾಗೂ ಪ್ರಹ್ಲಾದ್ ಜೋಶಿ. ಹೀಗಾಗಿ ಅವರೇ ನೇತೃತ್ವ ವಹಿಸಿ ಈ ಯೋಜನೆಗೆ ಅನುಮತಿ ಕೊಡಿಸಬೇಕು.

ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬಿಜೆಪಿಗೆ ಆಸಕ್ತಿ ಇಲ್ಲ: ಡಿ.ಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್ — PRINT
Published On :

ಹುಬ್ಬಳ್ಳಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬಿಜೆಪಿ ಆಸಕ್ತಿ ತೋರಿಸುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ಟೀಕಿಸಿದ್ದಾರೆ.

ಉಳಿದ ನಾಲ್ಕು ದಿನಗಳಲ್ಲಿ ವಿಧಾನಸಭೆ ಅಧಿವೇಶನದಲ್ಲಿ ಏನು ಚರ್ಚೆಯಾಗಲಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಬಿಜೆಪಿಗೆ ರಾಜಕೀಯ ಬಿಟ್ಟರೆ ಬೇರೇನೂ ಆಸಕ್ತಿ ಇಲ್ಲ, ಅವರ ಪಕ್ಷದಲ್ಲಿ ಒಗ್ಗಟ್ಟು ಇಲ್ಲ ಎಂದರು.

ಉತ್ತರ ಕರ್ನಾಟಕದ ಉತ್ತರ ಕರ್ನಾಟಕದ ನೀರಾವರಿ ವಿಚಾರವಾಗಿ ಚರ್ಚೆಯಾಗಬೇಕು ಎಂಬ ಪ್ರಶ್ನೆಗೆ, ನೀರಾವರಿ ವಿಚಾರವಾಗಿ ಚರ್ಚೆ ಮಾಡಲು ನಾನು ಸಿದ್ಧ. ನೀರಾವರಿ ಜತೆಗೆ ಬೇರೆ ವಿಚಾರಗಳೂ ಚರ್ಚೆಯಾಗಲಿ ಎಂದು ಉತ್ತರಿಸಿದರು.

ಮಹದಾಯಿ ಯೋಜನೆಗೆ ತಾರ್ಕಿಕ ಅಂತ್ಯ ಯಾವಾಗ ಎಂದು ಕೇಳಿದಾಗ, ಕೇಂದ್ರ ಅರಣ್ಯ ಸಚಿವರು ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನೂ ಭೇಟಿ ಮಾಡಿ ಚರ್ಚೆ ಮಾಡಿದ್ದು, ಮಹದಾಯಿ ಯೋಜನೆ ಕಾಮಗಾರಿಗಳ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕೇಂದ್ರದ ಅನುಮತಿ ದೊರೆತ ತಕ್ಷಣ ಕೆಲಸ ಆರಂಭವಾಗುತ್ತದೆ ಎಂದು ತಿಳಿಸಿದರು.

ಮಹದಾಯಿ ಯೋಜನೆ ವಿಚಾರವಾಗಿ ಸಂಭ್ರಮಾಚರಣೆ ಮಾಡಿದ್ದು ಜಗದೀಶ್ ಶೆಟ್ಟರ್ ಹಾಗೂ ಪ್ರಹ್ಲಾದ್ ಜೋಶಿ. ಹೀಗಾಗಿ ಅವರೇ ನೇತೃತ್ವ ವಹಿಸಿ ಈ ಯೋಜನೆಗೆ ಅನುಮತಿ ಕೊಡಿಸಬೇಕು. ಅವರು ಅರಣ್ಯ ಇಲಾಖೆ ಅನುಮತಿ ಕೊಡಿಸಲಿ ನಾವು ಕೆಲಸ ಆರಂಭಿಸುತ್ತೇವೆ. ಅನುಮತಿ ಸಿಗುವ ವಿಶ್ವಾಸ ಇದೆ" ಎಂದು ತಿಳಿಸಿದರು.

ಕೋವಿಡ್ ಅಕ್ರಮದ ಬಗ್ಗೆ ನ್ಯಾ.ಕುನ್ಹಾ ಸಮಿತಿ ವರದಿ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ. ಬಿಜೆಪಿ ಅವರ ಮೇಲೆ ಕೇಸು ದಾಖಲಿಸಲು ನಾವು ತನಿಖೆ ಮಾಡುತ್ತಿಲ್ಲ. ವರದಿ ಶಿಫಾರಸ್ಸಿನಂತೆ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳುತ್ತಿದ್ದು, ಮುಂದೆ ಏನು ಮಾಡುತ್ತಾರೋ ನೋಡೋಣ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.