ಯತ್ನಾಳ್, ತೇಜಸ್ವಿ ಸೂರ್ಯ, ಸತೀಶ್ ಜಾರಕಿಹೊಳಿ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್
ವಕ್ಫ್ ನೋಟಿಸ್ ಜಾರಿಯಿಂದ ಹಾವೇರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಆರ್ ಪಾಟೀಲ್ ಯತ್ನಾಳ್, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ.
ವಕ್ಫ್ ನೋಟಿಸ್ ಜಾರಿಯಿಂದ ಹಾವೇರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.
ಎಫ್‌ಐಆರ್ ರದ್ದುಗೊಳಿಸುವಂತೆ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕಳೆದ ವಾರ ನಡೆದಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ಮಂಡಳಿಯು ತನ್ನ ನಿರ್ಧಾರವನ್ನು ಮುಂದೂಡಿತು. ಇದೀಗ ತೀರ್ಪು ನೀಡಲಾಗಿದೆ.
ಮೃತ ರೈತನ ತಂದೆಯ ಹೇಳಿಕೆ ಆಧರಿಸಿ ತೇಜಸ್ವಿ ಸೂರ್ಯ ಅವರು ಟ್ವೀಟ್ ಮಾಡಿದ್ದರು. ಪೊಲೀಸರ ಸ್ಪಷ್ಟನೆ ನಂತರ ಟ್ವೀಟ್ ಡಿಲೀಟ್ ಮಾಡಿದ್ದರು.
ಇನ್ನು ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ನವೆಂಬರ್ 28ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿದೆ.
ಹಿಂದೂ ಧರ್ಮದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಆರೋಪದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ತಮ್ಮ ಮೇಲೆ ಹಾಕಿದ್ದ ಮಾನನಷ್ಟ ಮೊಕದ್ದಮೆ, ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದು ಮಾಡಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



