ಶ್ರೀರಂಗಪಟ್ಟಣ: ಬಿಗಿ ಪೊಲೀಸ್ ಭದ್ರತೆ ನಡುವೆ ಸಂಕೀರ್ತನಾ ಯಾತ್ರೆ ಶಾಂತಯುತವಾಗಿ ಮುಕ್ತಾಯ
ಮಸೀದಿ ಬಳಿ ಯಾತ್ರೆಯಲ್ಲಿ ಪಾಲ್ಗೊಂಡವರು ಮತ್ತು ಪೊಲೀಸರ ನಡುವೆ ಸಣ್ಣ ವಾಗ್ವಾದ ನಡೆದಿದೆ. ಇದನ್ನು ಹೊರತುಪಡಿಸಿದರೆ ಯಾವುದೇ ಅಹಿತರ ಘಟನೆ ನಡೆದಿಲ್ಲ.

ಮಂಡ್ಯ: ಹನುಮ ಜಯಂತಿ ಅಂಗವಾಗಿ ಹಿಂದೂ ಜಾಗರಣಾ ವೇದಿಕೆಯಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಭಾನುವಾರ ಬಿಗಿ ಪೊಲೀಸ್ ಭದ್ರತೆಯಲ್ಲಿ ಸಂಕೀರ್ತನಾ ಯಾತ್ರೆ ನಡೆಯಿತು. ಶಾಂತಯುತವಾಗಿ ಮೆರವಣಿಗೆ ಮುಕ್ತಾಯವಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿಮಿಷಾಂಬ ದೇವಾಲಯದ ಎದುರಿನ ಆಂಜನೇಯ ಸ್ವಾಮಿ ದೇಗುಲದಿಂದ ಆರಂಭವಾದ ಯಾತ್ರೆ ಶ್ರೀರಂಗನಾಥ ಸ್ವಾಮಿ ದೇಗುಲದ ಬಳಿ ಮುಕ್ತಾಯವಾಯಿತು. ಕೇಸರಿ ಶಾಲು ಧರಿಸಿದ್ದ ಕಾರ್ಯಕರ್ತರು, ಭಜನೆ, ಘೋಷಣೆ ಕೂಗುವ ಮೂಲಕ ಸುಮಾರು 4.3 ಕಿ. ಮೀ ದೂರ ಯಾತ್ರೆಯಲ್ಲಿ ಸಾಗಿದರು. ಯಾತ್ರೆ ಸಾಗುತ್ತಿದ್ದ ಜಾಮೀಯಾ ಮಸೀದಿ ಸುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಮಸೀದಿ ಬಳಿ ಯಾತ್ರೆಯಲ್ಲಿ ಪಾಲ್ಗೊಂಡವರು ಮತ್ತು ಪೊಲೀಸರ ನಡುವೆ ಸಣ್ಣ ವಾಗ್ವಾದ ನಡೆದಿದೆ. ಇದನ್ನು ಹೊರತುಪಡಿಸಿದರೆ ಯಾವುದೇ ಅಹಿತರ ಘಟನೆ ನಡೆದಿಲ್ಲ. ಶಾಂತಯುತವಾಗಿ ಯಾತ್ರೆ ಮುಕ್ತಾಯವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಶನಿವಾರ ಮತ್ತು ಭಾನುವಾರ ಮಸೀದಿಯನ್ನು ಬಂದ್ ಮಾಡಲಾಗಿತ್ತು. ಯಾವುದೇ ಅಹಿತರ ಘಟನೆ ನಡೆಯದಂತೆ ಕೆಎಸ್ ಆರ್ ಪಿ, ಜಿಲ್ಲಾ ಶಸಾಸ್ತ್ರ ಮೀಸಲು ಪಡೆ ನಿಯೋಜಿಸಲಾಗಿತ್ತು. 110 ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ, ವಿಡಿಯೋ ಮತ್ತು ಡ್ರೋನ್ ಕ್ಯಾಮರಾ ಅಳವಡಿಸಲಾಗಿತ್ತು ಎಂದು ಅವರು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


