ಗೋಕರ್ಣ: ಕುಡ್ಲೆ ಬೀಚಿನ ಸಮುದ್ರದಲ್ಲಿ ಮುಳುಗುತ್ತಿದ್ದ ವಿದೇಶಿ ಮಹಿಳೆಯರ ರಕ್ಷಣೆ
ಇಬ್ಬರು ವಿದೇಶಿ ಮಹಿಳೆಯರು ಸಮುದ್ರದ ಅಲೆಯ ಸುಳಿಗೆ ಸಿಲುಕಿ ಮುಳಗುವ ಹಂತದಲ್ಲಿದ್ದಾಗ ಬೋಟ್ ಮೂಲಕ ಸ್ಥಳಕ್ಕೆ ಧಾವಿಸಿದ ಮೈಸ್ಟಿಕ್ ಗೋಕರ್ಣ ಅಡ್ವೆಂಚರ್ಸ್ ಮತ್ತು ಜೀವ ರಕ್ಷಕ ಸಿಬ್ಬಂದಿ ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದ ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರು ವಿದೇಶಿ ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಗೋಕರ್ಣದ ಕುಡ್ಲೆ ಬೀಚ್ ನಲ್ಲಿ ಮಂಗಳವಾರ ನಡೆದಿದೆ.
ರಷ್ಯಾದ ಇರೀನಾ (37) ಮತ್ತು ಅನ್ಯ (27) ರಕ್ಷಣೆಗೊಳಗಾದವರಾಗಿದ್ದಾರೆ. ಒಟ್ಟು ಮೂವರು ಸಮುದ್ರದ ನೀರಿನಲ್ಲಿ ಈಜಾಡಲು ತೆರಳಿದ್ದು, ಇರೀನಾ ಮತ್ತು ಅನ್ಯ ಸಮುದ್ರದಲ್ಲಿ ಮುಳುಗುತ್ತಿದ್ದನ್ನು ಕಂಡ ಕೂಡಲೇ ಮೈಸ್ಟಿಕ್ ಗೋಕರ್ಣ ಅಡ್ವೆಂಚರ್ಸ್ ಮತ್ತು ಜೀವ ರಕ್ಷಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರಿಬ್ಬರನ್ನೂ ರಕ್ಷಿಸಿದ್ದಾರೆ.
ಇಬ್ಬರು ವಿದೇಶಿ ಮಹಿಳೆಯರು ಸಮುದ್ರದ ಅಲೆಯ ಸುಳಿಗೆ ಸಿಲುಕಿ ಮುಳಗುವ ಹಂತದಲ್ಲಿದ್ದಾಗ ಬೋಟ್ ಮೂಲಕ ಸ್ಥಳಕ್ಕೆ ಧಾವಿಸಿದ ಮೈಸ್ಟಿಕ್ ಗೋಕರ್ಣ ಅಡ್ವೆಂಚರ್ಸ್ ಮತ್ತು ಜೀವ ರಕ್ಷಕ ಸಿಬ್ಬಂದಿ ಪ್ರವಾಸಿಗರನ್ನು ರಕ್ಷಿಸಿ ದಡಕ್ಕೆ ತಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



