ರಾಜ್ಯ

ಕೋಲಾರ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಭೀಕರ ಡಿಕ್ಕಿ, ಐವರ ದುರ್ಮರಣ!

ಭೀಕರ ಅಪಘಾತದಲ್ಲಿ ಕೋನಂಗುಂಟೆ ಗ್ರಾಮದ ರಾಧಪ್ಪ, ವೆಂಕಟರಾಮಪ್ಪ, ಅಲುವೇಲಮ್ಮ ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ.

ಕೋಲಾರ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಭೀಕರ ಡಿಕ್ಕಿ, ಐವರ ದುರ್ಮರಣ!
ಅಪಘಾತದ ದೃಶ್ಯ
Published On :

ಕೋಲಾರ: ಮುಳಬಾಗಿಲು ತಾಲ್ಲೂಕಿನ ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಮೂರು ದ್ವಿಚಕ್ರ‌ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ ಕೋನಂಗುಂಟೆ ಗ್ರಾಮದ ರಾಧಪ್ಪ, ವೆಂಕಟರಾಮಪ್ಪ, ಅಲುವೇಲಮ್ಮ ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಮನೆಗೆ ಹೋಗುತ್ತಿದ್ದಾಗ‌ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಗಲಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.