ಮುಂದಿನ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ: ಜಿಲ್ಲಾ ಸಮಿತಿಗಳ ನಿರ್ಧಾರ
ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನ ಅತಿಥ್ಯಕ್ಕೆ ಕೋರಿಕೆ ಸಲ್ಲಿಸಿದವು. ಅಂತಿಮವಾಗಿ ಬಳ್ಳಾರಿ ಜಿಲ್ಲೆಗೆ ಸಮ್ಮೇಳನದ ಅತಿಥ್ಯ ನೀಡಲು ಎಲ್ಲ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಭಾನುವಾರ ತೆರೆ ಬೀಳಲಿದೆ. ಬರುವ ವರ್ಷ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ನಿನ್ನೆ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಭೆಯಲ್ಲಿ ನಿರ್ಧರಿಸಲಾಗಿದೆ.
ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನ ಅತಿಥ್ಯಕ್ಕೆ ಕೋರಿಕೆ ಸಲ್ಲಿಸಿದವು. ಅಂತಿಮವಾಗಿ ಬಳ್ಳಾರಿ ಜಿಲ್ಲೆಗೆ ಸಮ್ಮೇಳನದ ಅತಿಥ್ಯ ನೀಡಲು ಎಲ್ಲ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.
ಬಳ್ಳಾರಿಗೆ 66 ವರ್ಷದ ಬಳಿಕ ಮರಳಿ ಸಾಹಿತ್ಯ ಸಮ್ಮೇಳನದ ಅತಿಥ್ಯ ದೊರೆಯುತ್ತಿದೆ. ಈ ಹಿಂದೆ 1926, 1938 ಮತ್ತು 1958ರಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು.
ಈ ಬಾರಿ ಮಂಡ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ದಾಖಲೆ ಪ್ರಮಾಣದಲ್ಲಿ ಸಾಹಿತ್ಯಾಭಿಮಾನಿಗಳು ಸಮ್ಮೇಳನದಲ್ಲಿ ಭಾಗಿಯಾಗುತ್ತಿದ್ದಾರೆ. ಒಂದೆಡೆ ವಿಚಾರಗೋಷ್ಠಿ, ಮತ್ತೊಂದೆಡೆ ಪುಸ್ತಕ ಹಾಗೂ ವಾಣಿಜ್ಯ ಮಳಿಗೆಗಳು ಜನರನ್ನ ಆಕರ್ಷಿಸುತ್ತಿವೆ. ವಿವಿಧ ಬಗೆಯ ಖಾದ್ಯ, ಈ ಬಾರಿಯ ಅಡುಗೆ ಭಾರೀ ಸದ್ದು ಮಾಡಿದೆ.
ಇಂದು ಸಂಜೆ 4ಕ್ಕೆ ನಡೆಯಲಿರುವ ಸಮಾರೋಪ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀಗಳ ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ.ಗೊ.ರು.ಚನ್ನಬಸಪ್ಪ, ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ ಉಪಸ್ಥಿತರಿರಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



