ರಾಜ್ಯ

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ; ಆಡಿಯೋ, ವಿಡಿಯೋ ಸಾಕ್ಷ್ಯಗಳಿವೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿಟಿ ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ; ಆಡಿಯೋ, ವಿಡಿಯೋ ಸಾಕ್ಷ್ಯಗಳಿವೆ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ, ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರರು
Published On :

ಕಲಬುರಗಿ: ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿಟಿ ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಘಟನೆಗೆ ಹಲವು ಎಂಎಲ್‌ಸಿಗಳು ಸಾಕ್ಷಿಯಾಗಿದ್ದಾರೆ. ಇದು ಕ್ರಿಮಿನಲ್ ಅಪರಾಧವಾಗಿರುವುದರಿಂದ ನಾವು ಈ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಹೀಗಿರುವಾಗ ಅವರು (ರವಿ) ನ್ಯಾಯಾಂಗ ತನಿಖೆಗೆ ಏಕೆ ಒತ್ತಾಯಿಸುತ್ತಿದ್ದಾರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

'ಅವರು ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಪುರಾವೆಗಳಿವೆ. ಅನೇಕ ಎಂಎಲ್‌ಸಿಗಳು ಅವರು ಅಂದಿದ್ದನ್ನು ಕೇಳಿದ್ದಾರೆ. ಇದು ಕ್ರಿಮಿನಲ್ ಅಪರಾಧಕ್ಕೆ ಸಮಾನವಾಗಿದೆ, ಅಲ್ಲವೇ?' ಎಂದು ಕೇಳಿದರು.

ಈ ವಿಚಾರದಲ್ಲಿ ಬಿಜೆಪಿಯ ಹಿರಿಯ ನಾಯಕರ ನಡೆ ಅತ್ಯಂತ ಖಂಡನೀಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ನಡೆದ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ಮುಕ್ತಾಯದ ದಿನದಂದು ಪರಿಷತ್ತಿನೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ರವಿ ಅವರನ್ನು ಬಂಧಿಸಲಾಯಿತು. ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.