ಮಂಗಳೂರು: ಮೊಟ್ಟಮೊದಲ 'ರೋಬೋಟಿಕ್ ಬಟರ್‌ಫ್ಲೈ' ಶೋಗೆ ಚಾಲನೆ
ರೋಬೋಟಿಕ್ ಚಿಟ್ಟೆಗಳು, ಇರುವೆಗಳು, ಜೀನು ನೊಣ್ಣ ಮತ್ತಿತರ ಚಿತ್ರಣವನ್ನು ಪ್ರದರ್ಶನದಲ್ಲಿ ನೋಡಬಹುದಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 9 ರವರೆಗೂ ಈ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ.

ಮಂಗಳೂರು: ಡಿಸೆಂಬರ್ 21 ರಿಂದ ಜನವರಿ 19 ರವರೆಗೆ ನಡೆಯುವ ಒಂದು ತಿಂಗಳ ಕರಾವಳಿ ಉತ್ಸವದ ಅಂಗವಾಗಿ ಕದ್ರಿ ಪಾರ್ಕ್‌ನಲ್ಲಿ ಆಯೋಜಿಸಿರುವ ಮೊಟ್ಟ ಮೊದಲ 'ರೋಬೋಟಿಕ್ ಬಟರ್‌ಫ್ಲೈ ಶೋ' ಅನ್ನು ಶಾಸಕ ವೇದವ್ಯಾಸ್ ಕಾಮತ್ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಭಾನುವಾರ ಉದ್ಘಾಟಿಸಿದರು.
ರೋಬೋಟಿಕ್ ಚಿಟ್ಟೆಗಳು, ಇರುವೆಗಳು, ಜೀನು ನೊಣ್ಣ ಮತ್ತಿತರ ಚಿತ್ರಣವನ್ನು ಪ್ರದರ್ಶನದಲ್ಲಿ ನೋಡಬಹುದಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 9 ರವರೆಗೂ ಈ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಚಿಟ್ಟೆಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಚಿಟ್ಟೆಗಳ ಸಂರಕ್ಷಣೆ ಹಾಗೂ ಪರಿಸರ ಸಮತೋಲನ ಕುರಿತು ಜಾಗೃತಿ ಮೂಡಿಸಲು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ಮಂಗಳೂರಿಗರು ಪ್ರಥಮ ಬಾರಿಗೆ ಇಂತಹ ಪ್ರದರ್ಶನ ವೀಕ್ಷಿಸಲು ಉತ್ತಮ ಅವಕಾಶವಿದ್ದು, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರ ಯೋಜನೆಯಂತೆ ಕರಾವಳಿ ಉತ್ಸವ ಆಚರಣೆಯ ಅಂಗವಾಗಿ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ ಅಪರೂಪದ ಚಿಟ್ಟೆಗಳನ್ನು ಪ್ರದರ್ಶಿಸಲಾಗುತ್ತಿದ್ದು, ಮಕ್ಕಳಿಗೆ ಅವುಗಳ ಬಗ್ಗೆ ತಿಳಿದುಕೊಳ್ಳಲು ಉತ್ತಮ ಅವಕಾಶವಿದೆ. ಪ್ರದರ್ಶನದಲ್ಲಿ ಶಾಲಾ ಮಕ್ಕಳಿಗೆ ಶೇಕಡಾ 50 ರಷ್ಟು ರಿಯಾಯಿತಿ ಇದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



