ಬೆಂಗಳೂರು: ಪತ್ನಿಯನ್ನು ಓದಿಸಿ ಕೆಲಸಕ್ಕೆ ಸೇರಿಸಿದ್ದ ಪತಿ; ಆದರೆ ರಿಜಿಸ್ಟ್ರಾರ್ ಜೊತೆ ಹೆಂಡತಿ ಅನೈತಿಕ ಸಂಬಂಧಕ್ಕೆ ಬೇಸತ್ತು ಗಂಡ ಆತ್ಮಹತ್ಯೆ!
ಮೃತ ಸ್ವಾಮಿ ಪತ್ನಿ ವಿಶ್ವವಿದ್ಯಾಲಯದ ರಿಜಿಸ್ಟರ್ ಆಗಿದ್ದ ಮೈಲಾರಪ್ಪ ಎಂಬುವರ ಜೊತೆ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ.

ಬೆಂಗಳೂರು: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್ ನಲ್ಲಿ ನೆಲೆಸಿದ್ದ ಲಾರಿ ಮಾಲೀಕ 45 ವರ್ಷದ ಸ್ವಾಮಿ ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ವಾಮಿ ಪತ್ನಿ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಅಲ್ಲಿ ವಿಶ್ವವಿದ್ಯಾಲಯದ ರಿಜಿಸ್ಟರ್ ಆಗಿದ್ದ ಮೈಲಾರಪ್ಪ ಎಂಬುವರ ಜೊತೆ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ. ಈ ವಿಚಾರ ಗೊತ್ತಿದ್ದ ಮೈಲಾರಾಪ್ಪ ಅವರ ಪತ್ನಿಯ ಸ್ವಾಮಿ ಮನೆಗೆ ಬಂದು ಆತನ ಪತ್ನಿಗೆ ಬುದ್ಧಿ ಹೇಳಿ ಹೋಗಿದ್ದರು. ಆಕೆ ತನ್ನ ಚಾಳಿಯನ್ನು ಬಿಟ್ಟಿರಲಿಲ್ಲ. ಇದರಿಂದ ಬೇಸತ್ತು ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
2005-06ರಲ್ಲಿ ಸೋಮಶೇಖರ್ ಪವಿತ್ರಾಳನ್ನು ವಿವಾಹವಾಗಿದ್ದರು. ಪಿಯುಸಿ ಮಗಿಸಿದ್ದ ಪವಿತ್ರಾಳನ್ನು ಸ್ವಾಮಿ ಕಾಲೇಜಿಗೆ ಸೇರಿಸಿ ಬಿ.ಕಾಂ ಓದಿಸಿದ್ದನು. ನಂತರ ಪವಿತ್ರಾ ಬೆಂಗಳೂರು ವಿ.ವಿ.ಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿದ್ದರು. ಈ ವೇಳೆ ಬೆಂಗಳೂರು ವಿವಿ ಉಪಕುಲಪತಿ (ರಿಜಿಸ್ಟ್ರಾರ್) ಆಗಿದ್ದ ಮೈಲಾರಪ್ಪ ಪವಿತ್ರಾಳಿಗೆ ಹಣದಾಸೆ ತೋರಿಸಿ ಬುಟ್ಟಿಗೆ ಬೀಳಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



