ವರ್ತೂರ್ ಪ್ರಕಾಶ್ ವಿಚಾರಣೆಗೆ ಹಾಜರು: Facebook ಗೆಳತಿಯಿಂದ ಮಾಜಿ ಸಚಿವರಿಗೆ ಬಂಧನ ಭೀತಿ!
ಆರು ತಿಂಗಳ ಹಿಂದೆ ಫೇಸ್‌ಬುಕ್‌ನಲ್ಲಿ ಶ್ವೇತಾಗೌಡಳಿಗೆ ವರ್ತೂರು ಪ್ರಕಾಶ್ ಪರಿಚಯವಾಗಿದ್ದರು. ತಾನಾಗಿಯೇ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಮಾಜಿ ಸಚಿವರನ್ನು ಸ್ನೇಹದ ಬಲೆಗೆ ಶ್ವೇತಾ ಬೀಳಿಸಿಕೊಂಡಿದ್ದಳು.

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರಿಗೆ ಅವರ ಫೇಸ್‌ಬುಕ್ ಗೆಳತಿ ಶ್ವೇತಾಗೌಡ ಎಂಬಾಕೆ ಸಂಕಷ್ಟ ತಂದಿದ್ದು, ಚಿನ್ನದ ವ್ಯಾಪಾರಿಗೆ ಆಕೆ ಕೋಟ್ಯಂತರ ರು. ವಂಚನೆ ಎಸಗಿದ ಪ್ರಕರಣದಲ್ಲಿ ಮಾಜಿ ಸಚಿವರಿಗೆ ಬಂಧನ ಭೀತಿ ಎದುರಾಗಿದೆ. ಇದೇ ಪ್ರಕರಣದಲ್ಲಿ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅವರು ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಾಗಲಗುಂಟೆ ನಿವಾಸಿ ಶ್ವೇತಾ ಗೌಡ ಅವರನ್ನು ಬಂಧಿಸಿದ್ದರು. ಅವರಿಂದ ಚಿನ್ನ, ಕಾರು ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿತ್ತು. ಆರೋಪಿ ವಿಚಾರಣೆ ವೇಳೆ ವರ್ತೂರ್ ಪ್ರಕಾಶ್ ಅವರ ಹೆಸರು ಬಾಯ್ಬಿಟ್ಟಿದ್ದರು. ಆರೋಪಿ ಹೇಳಿಕೆ ಆಧರಿಸಿ ಪ್ರಕಾಶ್ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿತ್ತು. ಮಂಗಳವಾರ ಬೆಳಿಗ್ಗೆ ವಿಚಾರಣೆಗೆ ಪ್ರಕಾಶ್ ಹಾಜರಾಗಿದ್ದು, ಎಸಿಪಿ ಗೀತಾ ಅವರ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ತಾನು ವಂಚಿಸಿ ಸಂಪಾದಿಸಿದ್ದ ಚಿನ್ನದಲ್ಲಿ ವರ್ತೂರು ಪ್ರಕಾಶ್ ಅವರಿಗೆ ಸಹ ಪಾಲು ಕೊಟ್ಟಿದ್ದೇನೆ. ನನಗೆ ಚಿನ್ನದ ವ್ಯಾಪಾರಿ ಸಂಜಯ್ ಬಾಪ್ನ ಅವರನ್ನು ಮಾಜಿ ಸಚಿವರೇ ಪರಿಚಯಿಸಿದ್ದರು ಎಂದು ವಿಚಾರಣೆ ವೇಳೆ ಆರೋಪಿ ಶ್ವೇತಾಗೌಡ ಹೇಳಿಕೆ ಕೊಟ್ಟಿದ್ದಾಳೆ ಎಂದು ಮೂಲಗಳು ತಿಳಿಸಿವೆ.
ಆರು ತಿಂಗಳ ಹಿಂದೆ ಫೇಸ್‌ಬುಕ್‌ನಲ್ಲಿ ಶ್ವೇತಾಗೌಡಳಿಗೆ ವರ್ತೂರು ಪ್ರಕಾಶ್ ಪರಿಚಯವಾಗಿದ್ದರು. ತಾನಾಗಿಯೇ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಮಾಜಿ ಸಚಿವರನ್ನು ಸ್ನೇಹದ ಬಲೆಗೆ ಶ್ವೇತಾ ಬೀಳಿಸಿಕೊಂಡಿದ್ದಳು. ಬಳಿಕ ಫೇಸ್‌ಬುಕ್ ಮೆಸೆಂಜರ್‌ನಲ್ಲಿ ಪರಸ್ಪರ ಚಾಟಿಂಗ್ ಶುರುವಾಗಿದ್ದು, ಬಳಿಕ ಇಬ್ಬರ ನಡುವೆ ಮೊಬೈಲ್ ಸಂಖ್ಯೆ ವಿನಿಮಯವಾಗಿ ವಾಟ್ಸಾಪ್ ಮಾತುಕತೆ ಮುಂದುವರೆದಿತ್ತು. ಕಳೆದ ನಾಲ್ಕೈದು ತಿಂಗಳಿಂದ ಶ್ವೇತಾ ಹಾಗೂ ವರ್ತೂರು ಪ್ರಕಾಶ್ ನಡುವೆ ಆತ್ಮೀಯ ಒಡನಾಟವಿತ್ತು. ಈ ಸ್ನೇಹದ ವಿಚಾರವಾಗಿ ಇಬ್ಬರ ನಡುವೆ ಚಾಟಿಂಗ್ ವಿವರ ಹಾಗೂ ಪೋಟೋಗಳು ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



