ರಾಜ್ಯ

ಜಮ್ಮು: ಕಮರಿಗೆ ಉರುಳಿದ ಸೇನಾ ವಾಹನ, ಕರ್ನಾಟಕದ ಮೂವರು ಯೋಧರು ಹುತಾತ್ಮ; ಸಿಎಂ ಸಿದ್ದರಾಮಯ್ಯ ಸಂತಾಪ

ದೇಶ ಸೇವೆಗಾಗಿ ಹುತಾತ್ಮರಾದ ಯೋಧರ ತ್ಯಾಗ, ಬಲಿದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸ್ಮರಿಸಿದ್ದಾರೆ.

ಜಮ್ಮು: ಕಮರಿಗೆ ಉರುಳಿದ ಸೇನಾ ವಾಹನ, ಕರ್ನಾಟಕದ ಮೂವರು ಯೋಧರು ಹುತಾತ್ಮ; ಸಿಎಂ ಸಿದ್ದರಾಮಯ್ಯ ಸಂತಾಪ
ಹುತಾತ್ಮ ಯೋಧರಾದ ದಯಾನಂದ ತಿರಕ್ಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ
Published On :

ಬೆಳಗಾವಿ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸೇನಾ ವಾಹನ 150 ಅಡಿ ಕಮರಿಗೆ ಉರುಳಿಬಿದ್ದು ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಹುತಾತ್ಮರಾಗಿದ್ದು, ಒಬ್ಬರು ಗಾಯಗೊಂಡಿದ್ದರು.

ಹುತಾತ್ಮ ಯೋಧರನ್ನು ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45) ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಎಂದು ಗುರುತಿಸಲಾಗಿದೆ.

ಸುದ್ದಿ ತಿಳಿದು ಹುತಾತ್ಮ ಯೋಧರ ಸಂಬಂಧಿಕರು ಹಾಗೂ ಸ್ನೇಹಿತರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಸುಬೇದಾರ್ ದಯಾನಂದ ಅವರ ಕೆಲವು ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪಾರ್ಥಿವ ಶರೀರ ಗ್ರಾಮಕ್ಕೆ ಬರುವ ನಿರೀಕ್ಷೆಯಿದೆ ಎಂದು ತಿಳಿಸಲಾಗಿದೆ.

ದೇಶ ಸೇವೆಗಾಗಿ ಹುತಾತ್ಮರಾದ ಯೋಧರ ತ್ಯಾಗ, ಬಲಿದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸ್ಮರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.