ರಾಜ್ಯ

ಸಿ.ಟಿ ರವಿ ಸುತ್ತಾಡಿಸಿದ ಪ್ರಕರಣ: ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಸಸ್ಪೆಂಡ್

ಕರ್ತವ್ಯ ಲೋಪದಡಿ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನ ಅಮಾನತು ಮಾಡಿ ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಸಿ.ಟಿ ರವಿ ಸುತ್ತಾಡಿಸಿದ ಪ್ರಕರಣ: ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಸಸ್ಪೆಂಡ್
ಸಿ ಟಿ ರವಿ
Published On :

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ವಿಚಾರ ಸಂಬಂಧ ಎಂಎಲ್ ಸಿ ಸಿ.ಟಿ ರವಿ ಅವರನ್ನ ಬಂಧಿಸಿ ಸುತ್ತಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆತಂಡವಾಗಿದೆ.

ಕರ್ತವ್ಯ ಲೋಪದಡಿ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನ ಅಮಾನತು ಮಾಡಿ ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಬಿಜೆಪಿ ನಾಯಕರನ್ನು ಠಾಣೆಯೊಳಗೆ ಬಿಟ್ಟಿದ್ದಕ್ಕೆ ಅಮಾನತು ಮಾಡಲಾಗಿದೆ ಎನ್ನಲಾಗಿದೆ.

ಸಿಟಿ ರವಿ ಬಂಧನ ನಂತರ ಬಿಜೆಪಿ ನಾಯರಕನ್ನ ಠಾಣೆಯೊಳಗೆ ಬಿಟ್ಟಿದ್ದರು. ಈ ವೇಳೆ ಖಾನಾಪುರ ಠಾಣೆಯಲ್ಲಿ ಬಿಜೆಪಿ ನಾಯಕರು ಸಭೆ ಮಾಡಿದ್ದರು. ಆಗ ಕಮಿಷನರ್ ಯಡಾಮಾರ್ಟಿನ್ ಡಿಸಿಪಿ ರೋಹನ್ ಇದ್ದರು. ಕಮಿಷನರ್ ಅನುಮತಿ ಮೇರೆಗೆ ಬಿಜೆಪಿ ನಾಯಕರನ್ನ ಠಾಣೆಯೊಳಗೆ ಬಿಟ್ಟಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.