ರಾಜ್ಯ

ಹಾವೇರಿಯಲ್ಲಿ ಭೀಕರ ಅಪಘಾತ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸಾವು

ಅಪಘಾತದಲ್ಲಿ ಒಂದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮತ್ತೊಂದು ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾವೇರಿಯಲ್ಲಿ ಭೀಕರ ಅಪಘಾತ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸಾವು
ಕಾರುಗಳ ಮುಖಾಮುಖಿ ಡಿಕ್ಕಿ
Published On :

ಹಾವೇರಿ: ರಾಜ್ಯದಲ್ಲಿ ಬುಧವಾರ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿರುವ ಧಾರುಣ ಘಟನೆ ಶಿಗ್ಗಾಂವಿ ಬಳಿಯ ತಡಸ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಎಸ್‌ಯುವಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ತಿಮ್ಮಾಪುರ ಬಳಿಯಲ್ಲಿ ಅಪಘಾತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಒಂದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಉಸಿರುಚೆಲ್ಲಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಚಾಲಕ ಹಾಗೂ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮೃತರನ್ನು ಬೆಂಗಳೂರಿನ ಚಾಮರಾಜಪೇಟೆಯ 59 ವರ್ಷದ ಚಂದ್ರಮ್ಮ, ಅವರ ಮಗಳು ಮೀನಾ (38), ಕಾರು ಚಾಲಕ ಮಹೇಶ್ ಕುಮಾರ್ ಸಿ (41) ಹಾಗೂ ಧನ್ವೀರ್ (11) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಒಂದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮತ್ತೊಂದು ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.