ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣ
ಇದೇ ವೇಳೆ ವೀರಸೌಧದ ಆವರಣದಲ್ಲಿನ ಗಾಂಧಿ ಸ್ಮಾರಕ ಭವನದಲ್ಲಿನ ನವೀಕೃತ ಫೋಟೊ ಗ್ಯಾಲರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗುರುವಾರ ಅನಾವರಣಗೊಳಿಸಿದರು. ಇದರೊಂದಿಗೆ ‘ಗಾಂಧಿ ಭಾರತ’ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಇದೇ ವೇಳೆ ವೀರಸೌಧದ ಆವರಣದಲ್ಲಿನ ಗಾಂಧಿ ಸ್ಮಾರಕ ಭವನದಲ್ಲಿನ ನವೀಕೃತ ಫೋಟೊ ಗ್ಯಾಲರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.
ಬಳಿಕ ವೀರಸೌಧ (ಕಾಂಗ್ರೆಸ್ ಬಾವಿ) ಆವರಣದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜಂಟಿಯಾಗಿ ಸಸಿ ನೆಟ್ಟು ನೀರೆರೆದರು.
ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ, ಶರಣಬಸಪ್ಪ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಒಂ ಸಿಇಓ ರಾಹುಲ್ ಶಿಂಧೆ, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಉಪ ನಿರ್ದೆಶಕರಾದ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


