ರಾಜ್ಯ

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ವಾಹನ ತಲೆ ಮೇಲೆ ಹರಿದು ಬೈಕ್ ಸವಾರ ದುರ್ಮರಣ!

ಗಿರಿನಗರ ನಿವಾಸಿ ಶಂಕರ್ ಜಟ್ಟಿ (62) ಮೃತ ಸವಾರ. ನಿವೃತ್ತ ಬ್ಯಾಂಕ್ ನೌಕರರಾಗಿರುವ ಇವರು ಸಿಟಿ ಮಾರುಕಟ್ಟೆಗೆ ಬಂದು ತರಕಾರಿ ಖರೀದಿಸಿ ಮನೆಗೆ ತೆರಳುತ್ತಿದ್ದರು.

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ವಾಹನ ತಲೆ ಮೇಲೆ ಹರಿದು ಬೈಕ್ ಸವಾರ ದುರ್ಮರಣ!
ಅಪಘಾತ
Published On :

ಬೆಂಗಳೂರು: ನಿಯಂತ್ರಣ ತಪ್ಪಿ ರಸ್ತೆ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನದ ಚಕ್ರ ಹರಿದ ಪರಿಣಾಮ, ಸವಾರ ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ಸಿಟಿ.ಮಾರುಕಟ್ಟೆ-ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆಯಲ್ಲಿ ಶುಕ್ರವಾರ ನಡೆದಿದೆ.

ಗಿರಿನಗರ ನಿವಾಸಿ ಶಂಕರ್ ಜಟ್ಟಿ (62) ಮೃತ ಸವಾರ. ನಿವೃತ್ತ ಬ್ಯಾಂಕ್ ನೌಕರರಾಗಿರುವ ಇವರು ಸಿಟಿ ಮಾರುಕಟ್ಟೆಗೆ ಬಂದು ತರಕಾರಿ ಖರೀದಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬಿಜಿಎಸ್ ಮೇಲ್ಸೇತುವೆಯಲ್ಲಿ ನಿಯಂತ್ರಣ ತಪ್ಪಿದ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ, ಪರಿಣಾಮ ಪಕ್ಕದ ರಸ್ತೆಗೆ ಬಿದ್ದಿದ್ದಾರೆ.

ಈ ವೇಳೆ ಮೈಸೂರು ರಸ್ತೆ ಕಡೆಯಿಂದ ಸಿಟಿ ಮಾರುಕಟ್ಟೆಗೆ ಬರುತ್ತಿದ್ದ ಅಪರಿಚತ ವಾಹನದ ಚಕ್ರ ಅವರ ತಲೆ ಮೇಲ ಹರಿದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ಬಂದ ಸಂಚಾರ ಪೊಲೀಸರು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಚಾಮರಾಜಪೇಟೆ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತ ಎಸಗಿದ ಅಪರಿಚಿತ ವಾಹನದ ಪತ್ತೆಯಾಗಾಗಿ ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.