ರಾಜ್ಯ ಸರ್ಕಾರಿ ನೌಕರರ ಸಂಘ ಚುನಾವಣೆ: 2ನೇ ಅವಧಿಗೆ ಸಿಎಸ್ ಷಡಾಕ್ಷರಿ ಪುನರಾಯ್ಕೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಶುಕ್ರವಾರ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಿತು.

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ 2ನೇ ಅವಧಿಗೆ ಸಿ.ಎಸ್ ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಶುಕ್ರವಾರ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್.ಷಡಾಕ್ಷರಿಗೆ ಅವರಿಗೆ 507 ಮತಗಳು ಬಂದರೆ, ಬಿ.ಪಿ.ಕೃಷ್ಣೇಗೌಡಗೆ 442 ಮತಗಳು ಲಭಿಸಿದ್ದವು.
ಖಚಾಂಜಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ ನಾಗರಾಜ ಆರ್.ಜುಮ್ಮನ್ನವರ (ಷಡಾಕ್ಷರಿ ಬಣ), ವಿ.ವಿ.ಶಿವರುದ್ರಯ್ಯ (ಬಿ.ಪಿ.ಕೃಷ್ಣೇಗೌಡ ಬಣ) ವಿರುದ್ಧ ಕೇವಲ 18 ಮತಗಳ ಅಂತರದಿಂದ ಸೋಲು ಅನುಭವಿಸಿದರು. ವಿ.ವಿ.ಶಿವರುದ್ರಯ್ಯ 485 ಮತ ಪಡೆದರೆ, ನಾಗರಾಜ ಆರ್.ಜುಮ್ಮನ್ನವರಗೆ 467 ಮತಗಳು ಬಂದಿವೆ.
ಬೆಂಗಳೂರು ನಗರ ಜಿಲ್ಲೆಯ 102 ರಾಜ್ಯ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ಜಿಲ್ಲಾ ರಾಜ್ಯ ಪರಿಷತ್ ಸದಸ್ಯರು, ಜಿಲ್ಲಾ ಕಾರ್ಯದರ್ಶಿ, ತಾಲೂಕು ಶಾಖೆಯ ಅಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್ ಸದಸ್ಯರು, ಕಾರ್ಯದರ್ಶಿ ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು ಸೇರಿ ಒಟ್ಟು 949 ಮತದಾರರು ಮತ ಚಲಾಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


