ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಸಾರಿಗೆ ಇಲಾಖೆಯನ್ನು ದಿವಾಳಿಯ ಅಂಚಿಗೆ ತಳ್ಳುತ್ತಿದೆ: ಬಿ.ವೈ ವಿಜಯೇಂದ್ರ
ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜೂನ್ 11, 2023 ರಂದು ಶಕ್ತಿ ಯೋಜನೆಯನ್ನು ಪ್ರಾರಂಭಿಸಲಾಯಿತು.

ಬೆಂಗಳೂರು: ಆಯ್ದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಯು ಪಾರ್ಶ್ವವಾಯುವಿಗೆ ತುತ್ತಾಗಿದೆ, ದಿವಾಳಿಯತ್ತ ಕೊಂಡೊಯ್ಯುತ್ತಿದೆ ಎಂದು ಕರ್ನಾಟಕ ಬಿಜೆಪಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ಒಂದು ಕಾಲದಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿದ್ದ ಕರ್ನಾಟಕದ ಸಾರಿಗೆ ಇಲಾಖೆಯನ್ನು ಆರ್ಥಿಕವಾಗಿ ಕುಗ್ಗಿಸಿದ ಕೀರ್ತಿಗೆ ಕಾಂಗ್ರೆಸ್ ಸರ್ಕಾರ ಪಾತ್ರವಾಗಿದೆ. ಇಲಾಖೆಯ ಅಧೀನದಲ್ಲಿರುವ ನಾಲ್ಕು ನಿಗಮಗಳ ಬಾಕಿ ಮೊತ್ತ 6,468 ಕೋಟಿ ರೂ.ಗೂ ಹೆಚ್ಚಿದ್ದು, ತೀವ್ರ ಆರ್ಥಿಕ ನಷ್ಟದಲ್ಲಿ ಮುಳುಗಿವೆ ಎಂದರು.
'ಕಳೆದ ವೇತನ ಪರಿಷ್ಕರಣೆಯಾಗಿ 38 ತಿಂಗಳು ಕಳೆದಿದ್ದರೂ, ಬಾಕಿ ಪಾವತಿ ಹಾಗೆಯೇ ಉಳಿದಿದೆ. ಶಕ್ತಿ ಯೋಜನೆಯು ಈ ಬಿಕ್ಕಟ್ಟನ್ನು ಇನ್ನಷ್ಟು ಹದಗೆಡಿಸಿದೆ, ಇಲಾಖೆಯನ್ನು ದಿವಾಳಿಯ ಅಂಚಿಗೆ ದೂಡಿದೆ. ಸಾರಿಗೆ ನಿಗಮಗಳ ಆರ್ಥಿಕ ಸಂಕಷ್ಟವನ್ನು ಪರಿಹರಿಸಲು ಮತ್ತು ನೌಕರರ ಬಾಕಿ ಮೊತ್ತ ಪಾವತಿಯನ್ನು ಇತ್ಯರ್ಥಪಡಿಸಲು ಸರ್ಕಾರ ವಿಫಲವಾದರೆ ವ್ಯಾಪಕ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ. ಈ ಸರ್ಕಾರದ ನಾಚಿಕೆಗೇಡಿನ ರೀತಿಯನ್ನು ಖಂಡಿಸಿ ಜನರು ಬೀದಿಗಿಳಿಯುವ ದಿನ ದೂರವಿಲ್ಲ ಎಂದು ಎಚ್ಚರಿಸಿದರು.
ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ನಾಲ್ಕು ಸಾರಿಗೆ ನಿಗಮಗಳ ನೌಕರರು ಮೂಲ ವೇತನದಲ್ಲಿ ಶೇ 25 ರಷ್ಟು ಹೆಚ್ಚಳ ಹಾಗೂ ಬಾಕಿ ಪಾವತಿಗೆ ಆಗ್ರಹಿಸಿ ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ನಿಷ್ಕ್ರಿಯವಾಗಿದೆ ಎಂದು ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆರೋಪಿಸಿದೆ.
ನಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿಸೆಂಬರ್ 31 ರಂದು ಬೆಳಿಗ್ಗೆ 6 ಗಂಟೆಗೆ ಮುಷ್ಕರವನ್ನು ಪ್ರಾರಂಭಿಸಲಾಗುವುದು ಎಂದು ಸಮಿತಿ ಘೋಷಿಸಿದೆ. ಶಕ್ತಿ ಯೋಜನೆಯಡಿ ಸಾರಿಗೆ ಇಲಾಖೆಗೆ ಬಾಕಿ ಇರುವ 5,010 ಕೋಟಿ ರೂ.ಗಳಲ್ಲಿ 2,000 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಉಮೇಶ್ ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜೂನ್ 11, 2023 ರಂದು ಶಕ್ತಿ ಯೋಜನೆಯನ್ನು ಪ್ರಾರಂಭಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



