ರಾಜ್ಯ

ಹೊಸ ವರ್ಷಾಚರಣೆ: ನಾಳೆ ಸಂಜೆಯಿಂದ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನೋ ಎಂಟ್ರಿ

ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 7 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ.

ಹೊಸ ವರ್ಷಾಚರಣೆ: ನಾಳೆ ಸಂಜೆಯಿಂದ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನೋ ಎಂಟ್ರಿ
ನಂದಿ ಬೆಟ್ಟ
Published On :

ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಚಿಕ್ಕಬಳ್ಳಾಪುರ ಬಳಿ ಇರುವ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 7 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ನಂದಿ ಹಿಲ್ಸ್​​ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ.

ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ನಂದಿ ಗಿರಿಧಾಮದಲ್ಲಿ ನ್ಯೂಇಯರ್ ಸೆಲೆಬ್ರೇಷನ್‌ಗೆ ನಿರ್ಬಂಧ ಹೇರಲಾಗಿದೆ. ನಂದಿ ಬೆಟ್ಟದ ಸುತ್ತ 150ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸುತ್ತೇವೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸಿ ಹೇಳಿದ್ದಾರೆ.

ಡ್ರಿಂಕ್ ಆಂಡ್ ಡ್ರೈವ್ ಅಪಘಾತ ತಡೆಯುವ ಉದ್ದೇಶದಿಂದ ಮತ್ತು ಇತರ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.