ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು; ಮೃತರ ಸಂಖ್ಯೆ 8ಕ್ಕೆ ಏರಿಕೆ
ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟದಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆ ಸೇರಿದ್ದರು.

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ.
ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27) ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ಮಾಲಾಧಾರಿಗಳ ಸಾವಾಗಿದ್ದು, ಪ್ರಕಾಶ್ ಬಾರಕೇರ ಅವರ ಮಗ ವಿನಾಯಕ್ ಕಿಮ್ಸ್ ನಲ್ಲಿಚಿಕಿತ್ಸ ಮುಂದುವರಿದಿದೆ. ಸದ್ಯಕ್ಕೆ ಆರೋಗ್ಯ ಸ್ಥಿರವಾಗಿದೆ.
ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟದಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಗಾಯಾಳುಗಳನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಸಾವಿನ ಸರಣಿ ಮುಂದುವರಿದಿದ್ದು ಸೋಮವಾರ ರಾತ್ರಿ ರಾಮನಗರ ನಿವಾಸಿ 26 ವರ್ಷದ ತೇಜಸ್ವರ್ ಸಾತರೆ ಉಸಿರು ಚೆಲ್ಲಿದ್ದಾರೆ. ಮೃತ ತೇಸಜ್ವರ್ 3 ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಹಾಕುತ್ತಿದ್ದರು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ 9 ಜನ ಮಾಲಾಧಾರಿಗಳ ಪೈಕಿ ಇದೀಗ ಒಬ್ಬ ಗಾಯಾಳು ಮಾತ್ರ ಬದುಕುಳಿದಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಪ್ರಕರಣದ ಹಿನ್ನೆಲೆ
ಡಿಸೆಂಬರ್ 23ರಂದು ಬೆಳಗಿನ ಜಾವ ಹುಬ್ಬಳ್ಳಿಯ ಉಣಕಲ್ ಅಚ್ಚವ್ವ ಕಾಲೊನಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿತ್ತು. ಎಂದಿನಂತೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ತಮ್ಮ ವ್ರತವನ್ನು ಮುಗಿಸಿ, ಅಯ್ಯಪ್ಪನಿಗೆ ಪೂಜೆ ಸಲ್ಲಿಸಿ ನಿದ್ರೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಓರ್ವ ಅಯ್ಯಪ್ಪ ಮಾಲಾಧಾರಿಯ ಕಾಲು ಗ್ಯಾಸ್ ಸಿಲಿಂಡರ್ಗೆ ತಾಗಿದ ಪರಿಣಾಮ ಗ್ಯಾಸ್ ಸೋರಿಕೆಯಾಗಿತ್ತು. ದೇವರಿಗೆ ಹಚ್ಚಿದ್ದ ದೀಪ ಉರಿಯುತ್ತಿದ್ದರಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


