ರಾಜ್ಯ

ಹೊನ್ನಾವರ ಬಳಿ KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ; ಮೂವರು ಸಾವು

ಮೃತರನ್ನು ಭಟ್ಕಳ ತಾಲೂಕಿನ ರಾಘವೇಂದ್ರ ಸೋಮಯ್ಯ ಗೌಡ(34), ಗೌರೀಶ್ ನಾಯ್ಕ್(25) ಮತ್ತು ರಮೇಶ್ ನಾಯ್ಕ್ (22) ಎಂದು ಗುರುತಿಸಲಾಗಿದೆ.

ಹೊನ್ನಾವರ ಬಳಿ KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ; ಮೂವರು ಸಾವು
ಅಪಘಾತಕ್ಕಿಡಾದ ಬಸ್
Published On :

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆಯ ಮೇಲೆ ಬೈಕ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಭಟ್ಕಳ ತಾಲೂಕಿನ ರಾಘವೇಂದ್ರ ಸೋಮಯ್ಯ ಗೌಡ(34), ಗೌರೀಶ್ ನಾಯ್ಕ್(25) ಮತ್ತು ರಮೇಶ್ ನಾಯ್ಕ್ (22) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ‌ ಪರಿಶೀಲನೆ ನಡೆಸಿದರು. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.