ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ!
ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಡಾ.ಎಂ.ಬಿ ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ), ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು) ಮತ್ತು ಎ. ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯದ ವಿವಿಧೆಡೆ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ಇತ್ತೀಗೆಚೆ ವರ್ಗಾವಣೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿ ಮೇಜರ್ ಸರ್ಜರಿ ಮಾಡಲಾಗಿತ್ತು. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯ 218 ಪಿಎಸ್‌ಐಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


